ಬೆಂಗಳೂರು: ನಗರದ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ನಲ್ಲಿರುವ ನಟ ದರ್ಶನ್ ಅವರ ಮನೆ ಹಾಗೂ ಕಚೇರಿ ಮೇಲೆ ದುಷ್ಕರ್ಮಿಗಳು ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಕಲ್ಲು ತೂರಿದ್ದಾರೆ.
ದರ್ಶನ್ ಅವರು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ನಟಿ ಸುಮಲತಾ ಅವರ ಪರ ಪ್ರಚಾರಕ್ಕೆ ಇಳಿದಿದ್ದಾರೆ. ಹಾಗಾಗಿ, ಈ ಕಲ್ಲು ತೂರಾಟ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ.
ದರ್ಶನ್ ಅವರ ಕಾರಿನ ಗಾಜು ಜಖಂ ಆಗಿದೆ. ಈ ವೇಳೆ ಅವರು ಮನೆಯಲ್ಲಿ ಇರಲಿಲ್ಲ. ಗಿರಿನಗರದಲ್ಲಿ ಇರುವ ತಮ್ಮ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸೇರಿದ ಅಪಾರ್ಟ್ಮೆಂಟ್ನಲ್ಲಿ ಇದ್ದರು. ಘಟನೆ ನಡೆದ ವೇಳೆ ಮನೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಮಾತ್ರ ಇದ್ದರುಎನ್ನಲಾಗಿದೆ.
ಈ ಸಂಬಂಧ ಸೆಕ್ಯೂರಿಟಿ ಗಾರ್ಡ್ ದೂರು ನೀಡಿದ್ದು, ರಾಜರಾಜೇಶ್ವರಿನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.