ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದರ್ಶನ್‌ ಮನೆ ಮೇಲೆ ಕಲ್ಲು ತೂರಾಟ: ಕಾರಿಗೆ ಹಾನಿ

Last Updated 23 ಮಾರ್ಚ್ 2019, 10:02 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್‌ನಲ್ಲಿರುವ ನಟ ದರ್ಶನ್‌ ಅವರ ಮನೆ ಹಾಗೂ ಕಚೇರಿ ಮೇಲೆ ದುಷ್ಕರ್ಮಿಗಳು ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಕಲ್ಲು ತೂರಿದ್ದಾರೆ.

ದರ್ಶನ್‌ ಅವರು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ‍ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ನಟಿ ಸುಮಲತಾ ಅವರ ಪರ ಪ್ರಚಾರಕ್ಕೆ ಇಳಿದಿದ್ದಾರೆ. ಹಾಗಾಗಿ, ಈ ಕಲ್ಲು ತೂರಾಟ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ.

ದರ್ಶನ್ ಅವರ ಕಾರಿನ ಗಾಜು ಜಖಂ ಆಗಿದೆ. ಈ ವೇಳೆ ಅವರು ಮನೆಯಲ್ಲಿ ಇರಲಿಲ್ಲ. ಗಿರಿನಗರದಲ್ಲಿ ಇರುವ ತಮ್ಮ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸೇರಿದ ಅಪಾರ್ಟ್‍ಮೆಂಟ್‍ನಲ್ಲಿ ಇದ್ದರು. ಘಟನೆ ನಡೆದ ವೇಳೆ ಮನೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಮಾತ್ರ ಇದ್ದರುಎನ್ನಲಾಗಿದೆ.

ಈ ಸಂಬಂಧ ಸೆಕ್ಯೂರಿಟಿ ಗಾರ್ಡ್‌ ದೂರು ನೀಡಿದ್ದು, ರಾಜರಾಜೇಶ್ವರಿನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT