ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಮದ್ಯದ ಅಮಲಿನಲ್ಲಿ ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಿ ಕೊಲೆ: ಪೊಲೀಸರು

Published 11 ಜೂನ್ 2024, 5:42 IST
Last Updated 11 ಜೂನ್ 2024, 5:42 IST
ಅಕ್ಷರ ಗಾತ್ರ

ಬೆಂಗಳೂರು: ಚಿತ್ರದುರ್ಗದಿಂದ ಪಟ್ಟಣಗೆರೆಗೆ ರೇಣುಕಾಸ್ವಾಮಿ ಅವರನ್ನು ಕರೆತಂದು ಗೋದಾಮಿನಲ್ಲಿ ಕೂಡಿಹಾಕಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತದೇಹದ ಮೇಲೆ ಸಿಗರೇಟ್‌ನಿಂದ ಸುಟ್ಟಗಾಯವಾಗಿದೆ. ಮರ್ಮಾಂಗಕ್ಕೆ ಗಾಯವಾಗಿದೆ. ತಲೆಗೆ‌ ರಾಡ್‌ನಿಂದ ಬಲವಾಗಿ ಹೊಡೆಯಲಾಗಿದೆ.

ಆರೋಪಿಗಳ ಮದ್ಯದ ಅಮಲಿನಲ್ಲಿ ಈ ಕೃತ್ಯ ಎಸಗಿದ್ದಾರೆ. ವಿಚಾರಣೆ ಮುಂದುವರಿದಿದೆ. ವಿಚಾರಣೆ ಮುಗಿದ ಕೂಡಲೇ ನ್ಯಾಯಾಲಯಕ್ಕೆ ಹತ್ತು ಮಂದಿಯನ್ನು ಹಾಜರು ಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದರು.

ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್‌ ಹಾಕಿದ್ದಕ್ಕೆ ಕೊಲೆ?

ನಟ ದರ್ಶನ್ ಅವರ ಆಪ್ತೆ ಪವಿತ್ರಾಗೌಡ ಎಂಬವರ ಬಗ್ಗೆ ಚಿತ್ರದುರ್ಗದ ರೇಣುಕಾಸ್ವಾಮಿ ಸಾಮಾಜಿಕ ಮಾಧ್ಯಮದಲ್ಲಿ ‌ಅಶ್ಲೀಲವಾಗಿ ಕಮೆಂಟ್ ಹಾಕಿದ್ದರು ಎನ್ನಲಾಗಿದೆ. ಇದೇ ವಿಚಾರಕ್ಕೆ ಆರೋಪಿಗಳು ರೇಣುಕಾಸ್ವಾಮಿ ಅವರನ್ನು ಸುಮನಹಳ್ಳಿ ಬ್ರಿಡ್ಜ್‌ ಬಳಿಗೆ ಕರೆದೊಯ್ದು ಹತ್ಯೆ ಮಾಡಿದ್ದಾರೆ ಎಂಬುದು ಪ್ರಾಥಮಿಕ ವಿಚಾರಣೆಯಲ್ಲಿ ‌ಗೊತ್ತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT