ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗರಿಕರಂತೆ ವರ್ತಿಸಿ, ನಿಮ್ಮಿಂದಾಗಿ ಇಡೀ ದೇಶವನ್ನೇ ಬಲಿಕೊಡಬೇಡಿ: ದರ್ಶನ್ ವಿನಂತಿ

Last Updated 24 ಮಾರ್ಚ್ 2020, 5:59 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ವೈರಸ್‌ನಿಂದ ಪಾರಾಗುವುದೇ ಮೊದಲ ಆದ್ಯತೆಯಾಗಿರುವುದರಿಂದ ನಾಗರಿಕರಂತೆ ವರ್ತಿಸಿ, ನಿಮ್ಮಿಂದಾಗಿ ಇಡೀ ದೇಶವನ್ನೇ ಬಲಿಕೊಡಬೇಡಿ ಎಂದು ನಟ ದರ್ಶನ್ ಸಾರ್ವಜನಿಕರಲ್ಲಿ ವಿನಂತಿ ಮಾಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ವೊಂದನ್ನು ಪ್ರಕಟಿಸಿ ಜನರಲ್ಲಿ ಮನವಿ ಮಾಡಿದ್ದಾರೆ.

ನಾವು ಕೊರೊನಾ ವಿರುದ್ಧ ಹೋರಾಟ ನಡೆಸಬೇಕಿದೆ. ಇದರಿಂದ ಪಾರಾಗುವುದು ನಮ್ಮ ಮೊದಲ ಆದ್ಯತೆಯಾಗಿರಬೇಕು ಈ ನಿಟ್ಟಿನಲ್ಲಿ ಎಲ್ಲಾ ಭಾರತೀಯರೂ ಜನರಲ್ಲಿ ವೈರಸ್‌ ಬಗ್ಗೆ ಅರಿವು ಮೂಡಿಸಲು ವೈದ್ಯರು, ಅಧಿಕಾರಿಗಳು, ಸರ್ಕಾರ, ಪೊಲೀಸ್ ಸಿಬ್ಬಂದಿಗಳು ಶ್ರಮಿಸುತ್ತಿದ್ದಾರೆ ಅವರಿಗೆ ನಾವು ಸಾಥ್ ಕೊಡಬೇಕು ಎಂದು ಎಲ್ಲಾ ಭಾರತೀಯಲ್ಲಿ ಕಳಕಳಿಯ ಮನವಿ ಮಾಡುತ್ತೇನೆ ಎಂದು ದರ್ಶನ್ ಮನವಿ ಮಾಡಿದ್ದಾರೆ.

ಈ ಸೋಂಕು ಬಹಳ ಅಪಾಯಕಾರಿಯಾಗಿದ್ದು ಹಬ್ಬಕ್ಕೆ ಸಂಚಾರ ಮಾಡುವುದು, ಗುಂಪು ಸೇರುವುದನ್ನು ಮಾಡಬೇಡಿ. ಈ ರೀತಿ ಮಾಡಿದರೆ, ನಿಮ್ಮಿಂದಾಗಿ ಇಡೀ ದೇಶವೇ ಮಾರಣಹೋಮಕ್ಕೆ ತುತ್ತಾಗುತ್ತದೆ. ಈ ಬಗ್ಗೆ ಎಚ್ಚರಿಕೆಯಿಂದ ನಡೆದಕೊಂಡು ಸರ್ಕಾರದ ನಿಯಮಗಳನ್ನು ಪಾಲಿಸಿ, ಮನೆಯಲ್ಲಿ ಸುರಕ್ಷಿತವಾಗಿರಿ ಎಂದು ದರ್ಶನ್‌ ಮನವಿ ಮಾಡಿದ್ದಾರೆ.

ಎಲ್ಲಾ ಭಾರತೀಯರಲ್ಲೂ ನನ್ನ ಕಳಕಳಿಯ ವಿನಂತಿ. ಈ ಮಾರಕವಾದ ಕರೋನ ವೈರಸ್ ಇಂದ ಪಾರಾಗುವುದು ನಮ್ಮ ಮೊದಲ ಆಧ್ಯತೆ ಆಗಿರಬೇಕು. ಈ ವೈರಸ್ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ಗವರ್ನಮೆಂಟ್, ಡಾಕ್ಟರ್ಸ್, ಪೊಲೀಸ್ ಸಿಬ್ಬಂದಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ದಯಮಾಡಿ ನಿಮ್ಮ ಫ್ಯಾಮಿಲಿ ಗಾಗಿ, ನಿಮ್ಮ ನೆರೆಹೊರೆಯ ಗೆಳೆಯರಿಗಾಗಿ, ನಮಗಾಗಿ ಆದಷ್ಟು ನಿಮ್ಮ ಮನೆಯಲ್ಲಿ ಸುರಕ್ಷಿತವಾಗಿರಿ. ಈ ಸೋಂಕು ರೋಗ ಬಹಳ ಅಪಾಯಕಾರಿ ಎಂಬುದು ನಿಮಗೆ ತಿಳಿದರೂ ಸಹ ತಮ್ಮ ಊರುಗಳಿಗೆ ಹೋಗುವುದು, ಹಬ್ಬಕ್ಕಾಗಿ ಸಂಚರಿಸುವುದು ಮಾಡದಿರಿ. ನಿಮ್ಮ ಈ ಕೃತ್ಯದಿಂದ ಇಡೀ ದೇಶವೇ ಮಾರಣಹೋಮಕ್ಕೆ ತುತ್ತಾಗುವಂತೆ ಮಾಡದಿರಿ. ಇಟಲಿ ಸ್ಪೇನ್ ದೇಶಗಳಲ್ಲಿ ಜಾಗೃತಕ್ರಮಗಳನ್ನು ಮೊದಲೇ ಸರಿಯಾಗಿ ಪಾಲಿಸದೆ ಆಗುತ್ತಿರುವ ಅನಾಹುತಗಳು ನಿಮ್ಮ ಕಣ್ಣ ಮುಂದಿವೆ. ನಿಮ್ಮ ಕರ್ತವ್ಯ ಮನೆಯಲ್ಲಿಯೇ ಇದ್ದು ದೇಶದ ಹಿತಕ್ಕಾಗಿ ಎಲ್ಲಾ ನಿಯಮಗಳನ್ನು ಪಾಲಿಸುವುದು. ಇದನ್ನು ದಯಮಾಡಿ ನೆರವೇರಿಸಿಕೊಡಿ.'Common sense is not common' ಎನ್ನುವ ಹಾಗೆ ಮಾಡಬೇಡಿ. Please behave like a responsible citizen of the country. ನಿಮ್ಮ ದಾಸ ದರ್ಶನ್

A post shared by Darshan Thoogudeepa Shrinivas (@darshanthoogudeepashrinivas) on

ಈ ಫೋಸ್ಟ್‌ಗೆ ಸಾಕಷ್ಟು ಮೆಚ್ಚುಗೆಗಳು ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಈ ಪೋಸ್ಟ್‌ ಅನ್ನು 50 ಸಾವಿರಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT