ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ, ದರ್ಶನ್ ನಟನೆಯ ‘ಡೆವಿಲ್–ದಿ ಹೀರೊ’ ಚಿತ್ರದ ಎರಡನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಆರಂಭವಾಗಿದೆ.

ಶ್ರೀ ಜೈಮಾತ ಕಂಬೈನ್ಸ್ ಲಾಂಛನದಲ್ಲಿ ಜೆ.ಜಯಮ್ಮ ನಿರ್ಮಾಣದ ಈ ಚಿತ್ರದ ಚಿತ್ರೀಕರಣ 2024ರಲ್ಲಿ ಆರಂಭವಾಗಿತ್ತು. ‘ಕೆಲದಿನಗಳಲ್ಲಿ ಚಿತ್ರೀಕರಣದಲ್ಲಿ ದರ್ಶನ್ ಭಾಗಿಯಾಗಲಿದ್ದಾರೆ. ಅವರಿಗೆ ಬೆನ್ನು ನೋವಿನ ಸಮಸ್ಯೆ ಇರುವುದರಿಂದ ಈ ಹಂತದಲ್ಲಿ ಬರೀ ಮಾತಿನ ಭಾಗದ ಚಿತ್ರೀಕರಣ ಮಾಡಲಾಗುವುದು. ಸಾಹಸ ಸನ್ನಿವೇಶಗಳ ಚಿತ್ರೀಕರಣ ಸದ್ಯಕ್ಕಿಲ್ಲ. ಬೆಂಗಳೂರು, ಮೈಸೂರು, ಹೈದರಾಬಾದ್ ಹಾಗೂ ರಾಜಸ್ಥಾನದಲ್ಲಿ ಎರಡನೇ ಹಂತದ ಚಿತ್ರೀಕರಣ ಮಾಡುವ ಯೋಜನೆ ಹಾಕಿಕೊಂಡಿದ್ದೇವೆ’ ಎಂದಿದ್ದಾರೆ ಪ್ರಕಾಶ್ ವೀರ್.

ಚಿತ್ರದಲ್ಲಿ ನಾಯಕಿಯಾಗಿ ರಚನ ರೈ ನಟಿಸಿದ್ದು, ತುಳಸಿ, ಅಚ್ಯುತ್ ಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸಪ್ರಭು, ಶೋಭರಾಜ್ ಮುಂತಾದವರು ಎರಡನೇ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ. ಸುಧಾಕರ್ ಎಸ್.ರಾಜ್ ಛಾಯಾಚಿತ್ರಗ್ರಹಣ, ಬಿ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಮೋಹನ್ ಬಿ. ಕೆರೆ ಕಲಾ ನಿರ್ದೇಶನ ಹಾಗೂ ರಾಮ್ ಲಕ್ಷ್ಮಣ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.