ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ, ದರ್ಶನ್ ನಟನೆಯ ‘ಡೆವಿಲ್–ದಿ ಹೀರೊ’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಡಬ್ಬಿಂಗ್ ಕೂಡಾ ಮುಗಿದಿದೆ ಎಂದು ಚಿತ್ರತಂಡ ತಿಳಿಸಿದೆ.

ಶೀಘ್ರದಲ್ಲೇ ಸಿನಿಮಾ ತೆರೆಕಾಣಲಿದೆ ಎಂದು ಪ್ರಕಾಶ್ ವೀರ್ ಹೇಳಿದ್ದಾರೆ.

ಜೆ.ಜಯಮ್ಮ ನಿರ್ಮಾಣ ಮಾಡಿರುವ ಈ ಚಿತ್ರದ ಹಾಡುಗಳ ಚಿತ್ರೀಕರಣ ಇತ್ತೀಚೆಗಷ್ಟೇ ಬ್ಯಾಂಕಾಕ್ನಲ್ಲಿ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸ ಬಿರುಸಿನಿಂದ ಸಾಗಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.

‘ಎಲ್ಲಾ ಕಲಾವಿದರ ಡಬ್ಬಿಂಗ್ ಪೂರ್ಣವಾಗಿದೆ. ಸದ್ಯದಲ್ಲೇ ಹಾಡೊಂದನ್ನು ಬಿಡುಗಡೆ ಮಾಡುತ್ತೇವೆ’ ಎಂದು ಪ್ರಕಾಶ್ ವೀರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.