ಬೆಂಗಳೂರು: ನಟ ದರ್ಶನ್ ಅಭಿಮಾನಿಗಳ ಮೆಸೇಜ್ಗೂ, ರೇಣುಕಸ್ವಾಮಿ ಮೆಸೇಜ್ಗೂ ಯಾವುದೇ ವ್ಯತ್ಯಾಸ ಇಲ್ಲ ಎಂದು ನಟಿ ರಮ್ಯಾ ಕಿಡಿಕಾರಿ ಹಾಕಿದ್ದ ಇನ್ಸ್ಟಾಗ್ರಾಂ ಸ್ಟೇಟಸ್ ವ್ಯಾಪಕ ಚರ್ಚೆಯಾಗುತ್ತಿದೆ.

ಇನ್ನು, ಈ ವಿಚಾರ ಸದ್ದು ಮಾಡುತ್ತಿದ್ದಂತೆ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು ರಮ್ಯಾ ಅವರನ್ನು ಉದ್ದೇಶಿಸಿಯೇ ವಿಜಯಲಕ್ಷ್ಮಿ ಈ ಪೋಸ್ಟ್ ಹಾಕಿದ್ದಾರೆ ಎಂದು ಪರ–ವಿರೋಧಿಗಳು ಚರ್ಚಿಸುತ್ತಿದ್ದಾರೆ.

‘ಮೂರ್ಖ ತನ್ನ ಮಾತುಗಳಿಂದ ಎಲ್ಲರಿಗೂ ಪರಿಚಯನಾಗುತ್ತಿರುತ್ತಾನೆ. ಜಾಣ ಯಾವಾಗಲೂ ಮೌನಿ ಆಗಿರುತ್ತಾನೆ’ ಎಂದು ಬುದ್ಧನ ಚಿತ್ರವಿರುವ ಫೋಟೊವನ್ನು ವಿಜಯಲಕ್ಷ್ಮಿ ಹಂಚಿಕೊಂಡಿದ್ದಾರೆ.

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರೆ ಆರು ಆರೋಪಿಗಳಿಗೆ ಜಾಮೀನು ನೀಡಿರುವ ಕರ್ನಾಟಕ ಹೈಕೋರ್ಟ್ ಕ್ರಮಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿತ್ತು. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪ್ರತಿಕ್ರಿಯಿಸಿದ್ದ ರಮ್ಯಾ, ದೇಶದ ಜನಸಾಮಾನ್ಯರಿಗೆ ಸುಪ್ರೀಂ ಕೋರ್ಟ್ ಭರವಸೆಯ ಬೆಳಕು. ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ ಮೂಡಿದೆ ಎಂದು ಪೋಸ್ಟ್ ಮಾಡಿದ್ದರು.

ಅಂದಿನಿಂದ (ಜುಲೈ 24) ರಮ್ಯಾ ಹಾಗೂ ದರ್ಶನ್ ಫ್ಯಾನ್ಸ್ ನಡುವೆ ಸಾಮಾಜಿಕ ಜಾಲತಾಣದಲ್ಲಿ ವಾರ್ ನಡೆಯುತ್ತಿದೆ. ಶನಿವಾರ (ಜುಲೈ 26) ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದ ರಮ್ಯಾ, 'ದರ್ಶನ್ ಅಭಿಮಾನಿಗಳಿಗೆ ನನ್ನ ಇನ್ಸ್ಟಾಗ್ರಾಮ್ಗೆ ಸ್ವಾಗತ. ರೇಣುಕಸ್ವಾಮಿ ಅವರ ಕುಟುಂಬಕ್ಕೆ ನ್ಯಾಯ ಏಕೆ ಬೇಕು ಎಂಬುದಕ್ಕೆ ನಿಮ್ಮ ಕಮೆಂಟ್ಗಳೇ ಸಾಕ್ಷಿ' ಎಂದಿದ್ದರು.

ಇದಕ್ಕೆ ದರ್ಶನ್ ಅಭಿಮಾನಿಗಳು ಅಶ್ಲೀಲ ಪದಗಳಿಂದ ನಿಂದಿಸಿದ್ದಾರೆ.

ಈ ಬಗ್ಗೆ ಇನ್ಸ್ಟಾಗ್ರಾಮ್ನಲ್ಲಿ ಸಂದೇಶ ಹಂಚಿಕೊಂಡಿರುವ ರಮ್ಯಾ, 'ರೇಣುಕಸ್ವಾಮಿ ಮಾಡಿದ್ದ ಸಂದೇಶಕ್ಕೂ ದರ್ಶನ್ ಅಭಿಮಾನಿಗಳು ಮಾಡುವ ಸಂದೇಶಕ್ಕೂ ಯಾವುದೇ ವ್ಯತ್ಯಾಸ ಇಲ್ಲ. ಇಂತಹ ಸ್ತ್ರೀದ್ವೇಷದ ಮನಸ್ಥಿತಿಯ ಕಾರಣದಿಂದಲೇ ಸಮಾಜದಲ್ಲಿ ಅತ್ಯಾಚಾರ, ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ' ಎಂದಿದ್ದಾರೆ.

ಅದರ ಜೊತೆಗೆ ದರ್ಶನ್ ಅಭಿಮಾನಿಗಳು ಅವರಿಗೆ ಮಾಡಿರುವ ಅಶ್ಲೀಲ ಸಂದೇಶಗಳನ್ನು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.