ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ 55ನೇ ಸಿನಿಮಾದ ಶೀರ್ಷಿಕೆ ಗಣೇಶ ಚತುರ್ಥಿಗೆ(ಸೆ.10) ಅನಾವರಣಗೊಳ್ಳಲಿದೆ.

2019ರಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡಿದ್ದ ‘ಯಜಮಾನ’ ಚಿತ್ರತಂಡವು ಡಿ55 ಸಿನಿಮಾದ ಮೂಲಕ ಇದೀಗ ಮತ್ತೆ ಒಂದಾಗುತ್ತಿದ್ದು, ಸಿನಿಮಾವನ್ನು ಶೈಲಜಾ ನಾಗ್ ಹಾಗೂ ಬಿ.ಸುರೇಶ್ ನಿರ್ಮಾಣ ಮಾಡುತ್ತಿದ್ದು, ವಿ.ಹರಿಕೃಷ್ಣ ನಿರ್ದೇಶಿಸಲಿದ್ದಾರೆ. ದರ್ಶನ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಶೀರ್ಷಿಕೆ ಅನಾವರಣದ ಬಗ್ಗೆ ಮಾಹಿತಿ ನೀಡಿದ್ದಾರೆ.

ಚಿತ್ರಕಥೆ, ನಿರ್ದೇಶನ ಹಾಗೂ ದರ್ಶನ್ ಅವರ ಭರ್ಜರಿ ಡೈಲಾಗ್‌ಗಳು ಹಾಗೂ ಸಾಹಸ ದೃಶ್ಯಗಳಿಂದ ‘ಯಜಮಾನ’ ಚಿತ್ರ ಯಶಸ್ಸು ಕಂಡಿತ್ತು. ನಿರ್ದೇಶನದ ಜೊತೆಗೆ ವಿ. ಹರಿಕೃಷ್ಣ ಅವರ ಸಂಗೀತ ಸಂಯೋಜನೆಯಿದ್ದ ಈ ಚಿತ್ರದ ಎಲ್ಲಾ ಹಾಡುಗಳು ಹಿಟ್ ಆಗಿದ್ದವು. ಇದೇ 11 ಮತ್ತು 12ರಂದು ನಡೆಯಲಿರುವ ಸೈಮಾ ಪ್ರಶಸ್ತಿಯಲ್ಲಿ 2019ರ ಅತ್ಯುತ್ತಮ ಚಿತ್ರ, ಅತ್ಯುತ್ತಮ ನಿರ್ದೇಶಕ, ಅತ್ಯುತ್ತಮ ನಟ ಹೀಗೆ 12 ನಾಮಿನೇಷನ್‌ಗಳನ್ನು ಈ ಸಿನಿಮಾ ಪಡೆದಿದೆ. 2019ರಲ್ಲಿ ದರ್ಶನ್ ಅಭಿನಯದ ‘ಯಜಮಾನ’, ‘ಕುರುಕ್ಷೇತ್ರ’ ಮತ್ತು ‘ಒಡೆಯ’ ಸಿನಿಮಾಗಳು ತೆರೆಕಂಡಿದ್ದವು. 2021ರ ಮಾರ್ಚ್‌ನಲ್ಲಿ ತೆರೆಕಂಡ ‘ರಾಬರ್ಟ್’ ದರ್ಶನ್ ನಟನೆಯ 53ನೇ ಸಿನಿಮಾ. ಪ್ರಸ್ತುತ ದರ್ಶನ್, ಎಸ್.ವಿ. ರಾಜೇಂದ್ರಸಿಂಗ್ ಬಾಬು ನಿರ್ದೇಶಿಸಿರುವ ‘ರಾಜವೀರ ಮದಕರಿ ನಾಯಕ’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.