ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದುಗೊಂಡು ಮತ್ತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ತಮ್ಮ ಪತ್ನಿ ವಿಜಯಲಕ್ಷ್ಮಿ ಮೂಲಕ ಅಭಿಮಾನಿಗಳಿಗೆ ಸಂದೇಶವೊಂದನ್ನು ಕಳುಹಿಸಿದ್ದಾರೆ.

ಈ ಸಂದೇಶವನ್ನು ವಿಜಯಲಕ್ಷ್ಮಿ ತಮ್ಮ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ‘ಇದು ದರ್ಶನ್ ಅವರು ನಿಮಗೆ ಕಳಿಸಿರುವ ಸಂದೇಶ’ ಎಂದು ವಿಜಯಲಕ್ಷ್ಮಿ ಪೋಸ್ಟ್ನ ಆರಂಭದಲ್ಲಿ ಹೇಳಿದ್ದಾರೆ.

ನನ್ನ ಸುಖದಲ್ಲಿ ಭಾಗಿಯಾಗಿ, ಕಷ್ಟದಲ್ಲಿ ಬೆನ್ನೆಲುಬಾಗಿ ನಿಂತ ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಜೀವನಪರ್ಯಂತ ಆಭಾರಿ. ನಾನು ಎಲ್ಲೇ ಇದ್ದರು ಹೇಗೆ ಇದ್ದರು ನಿಮ್ಮಗಳ ಶ್ರೇಯೋಭಿಲಾಷೆಯನ್ನೆ ಬಯಸುತ್ತೇನೆ. ಪ್ರಸಕ್ತ ವಿದ್ಯಮಾನ ಏನೇ ಇದ್ದರು, ನನ್ನ ನಂಬಿ ಕನಸು ಕಂಡಿರುವ ನಿರ್ದೇಶಕರ ಹಾಗು ನನ್ನ ಮೇಲೆ ಕೋಟ್ಯಂತರ ರೂಪಾಯಿ ಹಣ ಹೂಡಿರುವ ನಿರ್ಮಾಪಕರ ಬೆಂಬಲವಾಗಿ ನಿಲ್ಲಬೇಕಾದ್ದು ನನ್ನ ಆದ್ಯ ಕರ್ತವ್ಯ. ಹಾಗಾಗಿ ನನ್ನ ‘ದಿ ಡೆವಿಲ್’ ಚಿತ್ರದ ಎಲ್ಲಾ ಕೆಲಸ ಕಾರ್ಯಗಳು ಯಾವುದೇ ಅಡೆತಡೆ ಇಲ್ಲದೆ ಸಾಗಲಿ ಎಂಬುದು ನನ್ನ ಆಶಯ. ಹಾಗಾಗಿ ಅದಕ್ಕೆ ನನ್ನ ಸಂಪೂರ್ಣ ಸಹಕಾರವಿದೆ ಎಂದು ಈ ಮೂಲಕ ತಿಳಿಸುತ್ತಿದ್ದೇನೆ. ಇದಕ್ಕೆ ನನ್ನ ಸೆಲೆಬ್ರಿಟಿಗಳ ಸಹಮತವಿದೆಯೆಂದು ಧೃಡವಾಗಿ ನಂಬಿದ್ದೇನೆ’ ಎಂದು ಪೋಸ್ಟ್ನಲ್ಲಿ ಉಲ್ಲೇಖಿಸಲಾಗಿದೆ.

‘ಸಿನಿಮಾ ಒಂದು ಮನರಂಜನೆಯ ಮಾಧ್ಯಮ ಅದನ್ನು ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ನೋಡಬೇಕು’ ಎಂದೂ ಆ ಪೋಸ್ಟ್ನಲ್ಲಿ ಬರೆಯಲಾಗಿದೆ.

ದರ್ಶನ್ ಬಂಧನದಿಂದಾಗಿ ಆ.15ರಂದು ಬಿಡುಗಡೆಯಾಗಬೇಕಿದ್ದ ‘ದಿ ಡೆವಿಲ್’ ಚಿತ್ರದ ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆಯನ್ನು ಚಿತ್ರತಂಡ ಮುಂದೂಡಿತ್ತು. ಇದರ ಬೆನ್ನಲ್ಲೇ ವಿಜಯಲಕ್ಷ್ಮಿ ಈ ಪೋಸ್ಟ್ ಹಾಕಿದ್ದಾರೆ.
.ರೇಣುಕಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಬಂಧಿಸಿದ ಪೊಲೀಸರು.ನಟ ದರ್ಶನ್ ಜಾಮೀನು ರದ್ದು: ಡೆವಿಲ್ ಸಿನಿಮಾದ ಹಾಡು ಬಿಡುಗಡೆ ಮುಂದಕ್ಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.