ಬೆಂಗಳೂರು: ರಾಜ್ಯವನ್ಯಜೀವಿ ಮಂಡಳಿಯಲ್ಲಿ ಖಾಲಿ ಇದ್ದ ಸದಸ್ಯ ಸ್ಥಾನಕ್ಕೆ ಚಿತ್ರನಟ ದರ್ಶನ್ ತೂಗುದೀಪ್ ಅವರನ್ನು ನೇಮಕ ಮಾಡಲಾಗಿದೆ.

ದರ್ಶನ್ ಅವರು ವನ್ಯಜೀವಿ ಛಾಯಾಗ್ರಾಹಕ ಹಾಗೂ ಪ್ರಾಣಿಶಾಸ್ತ್ರ ಪ್ರಾಧಿಕಾರದ ಬ್ರಾಂಡ್ ಅಂಬಾಸಿಡರ್ ಆಗಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ನೇಮಕ ಮಾಡಲಾಗಿದೆ ಎಂದು ಅರಣ್ಯ ಇಲಾಖೆ ನ.15ರಂದು ಹೊರಡಿಸಿದ ಆದೇಶದಲ್ಲಿ ಉಲ್ಲೇಖಿಸಿದೆ.

ಮಂಡಳಿಯ ಸದಸ್ಯರಾಗಿದ್ದ ವಿಧಾನಪರಿಷತ್ತಿನ ಬಿಜೆಪಿ ಸದಸ್ಯ ಶಾಂತರಾಮ ಸಿದ್ದಿ ಅವರ ಬದಲು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ.

ಇಬ್ಬರ ಸದಸ್ಯತ್ವದ ಅವಧಿ 2023 ರ ಅಕ್ಟೋಬರ್ 15ರವರೆಗೆ ಅಥವಾ ಮುಂದಿನ ಆದೇಶದವರೆಗೆ ಇರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.