ಶುಕ್ರವಾರ, ಜನವರಿ 22, 2021
22 °C

ಏಪ್ರಿಲ್‌ನಲ್ಲಿ ತೆರೆಗೆ ಬರಲಿದ್ದಾನೆ ರಾಬರ್ಟ್?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋವಿಡ್‌–19 ಲಾಕ್‌ಡೌನ್‌ ಬಳಿಕ ಥಿಯೇಟರ್‌ಗಳು ಪುನರಾರಂಭಗೊಂಡಿದ್ದು ನಿಧಾನಕ್ಕೆ ಸಿನಿಮಾಗಳು ಥಿಯೇಟರ್‌ನಲ್ಲಿ ಬಿಡುಗಡೆಯಾಗುತ್ತಿವೆ. ಬಿಗ್‌ಬಜೆಟ್‌ ಸಿನಿಮಾಗಳ ಬಿಡುಗಡೆಗೆ ನಿರ್ಮಾಪಕರು ಹಿಂದೇಟು ಹಾಕುತ್ತಿರುವುದು ಸತ್ಯವಾದರೂ ಕೆಲವೊಂದು ಸಿನಿಮಾಗಳು ಬಿಡುಗಡೆಗೆ ಸಜ್ಜಾಗುತ್ತಿವೆ. ಈಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ ‘ರಾಬರ್ಟ್’ ಸಿನಿಮಾ ಏಪ್ರಿಲ್‌ನಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳು ಕಾಣಿಸುತ್ತಿವೆ.

ತರುಣ್ ಸುಧೀರ್ ನಿರ್ದೇಶನದ ಈ ಸಿನಿಮಾ ಪೂರ್ಣಗೊಂಡಿದ್ದು, ಸಿನಿಮಾ ಬಿಡುಗಡೆ ದಿನಾಂಕ ನಿರ್ಧಾರದ ಮೇಲೆ ಚಿತ್ರತಂಡ ಕೆಲಸ ಮಾಡುತ್ತಿದೆ ಎನ್ನಲಾಗುತ್ತಿದೆ. ಸದ್ಯ ಚಿತ್ರಮಂದಿರದಲ್ಲಿ ಶೇ 50 ರಷ್ಟು ಮಂದಿಗೆ ಮಾತ್ರ ಅವಕಾಶವಿದ್ದು ಶೇ 100 ಅವಕಾಶ ಸಿಕ್ಕಿದ ಮೇಲೆ ಬಿಡುಗಡೆ ಮಾಡುವುದಾಗಿ ನಿರ್ಮಾಣದ ತಂಡ ತಿಳಿಸಿದೆ.

ಪುನೀತ್‌ ರಾಜ್‌ಕುಮಾರ್ ನಟನೆಯ ‘ಯುವರತ್ನ’ ಸಿನಿಮಾ ಕೂಡ ಏಪ್ರಿಲ್‌ನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದ್ದು, ರಾಬರ್ಟ್‌ ಕೂಡ ಬಿಡುಗಡೆಯಾದರೆ ಎರಡು ಬಿಗ್‌ಬಜೆಟ್ ಸಿನಿಮಾಗಳು ಏಪ್ರಿಲ್‌ನಲ್ಲಿ ಥಿಯೇಟರ್‌ನಲ್ಲಿ ತೆರೆ ಕಾಣಲಿವೆ.

ರಾಬರ್ಟ್‌ನಲ್ಲಿ ಆಶಾ ಭಟ್ ನಾಯಕಿಯಾಗಿ ನಟಿಸುತ್ತಿದ್ದು ಜಗಪತಿ ಬಾಬು, ವಿನೋದ್ ಪ್ರಭಾಕರ್‌, ಸೋನಲ್ ಮೊಂತೆರೊ, ರವಿ ಕಿಶನ್‌, ಚಿಕ್ಕಣ್ಣ, ಶಿವರಾಜ್ ಕೆ.ಆರ್. ಪೇಟೆ, ಐಶ್ವರ್ಯಾ ಪ್ರಸಾದ್ ಮೊದಲಾದವರು ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರಕ್ಕೆ ಸುಧಾಕರ್ ಎಸ್‌. ರಾಜ್ ಸಿನಿಮಾಟೊಗ್ರಫಿ ಇದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು