ಸೋಮವಾರ, ಅಕ್ಟೋಬರ್ 3, 2022
24 °C

ನಿರ್ಮಾಪಕ ಭರತ್‌ಗೆ ‘ಡಿ ಬಾಸ್‌‘ ದರ್ಶನ್ ಬೆದರಿಕೆ: ನಟನ ವಿರುದ್ಧ ಎನ್‌ಸಿಆರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಿನಿಮಾ ನಿರ್ಮಾಪಕ ಭರತ್ ವಿಷ್ಣುಕಾಂತ್ ಅವರಿಗೆ ಜೀವ ಬೆದರಿಕೆಯೊಡ್ಡಿರುವ ಆರೋಪದಡಿ ನಟ ದರ್ಶನ್‌ ವಿರುದ್ಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿದೆ.

‘ಭರತ್ ಅವರು ದೂರು ನೀಡಿದ್ದಾರೆ. ದೂರಿನ ಅಂಶಗಳನ್ನು ಪರಿಗಣಿಸಿ ಎನ್‌ಸಿಆರ್ (ಗಂಭೀರವಲ್ಲದ ಪ್ರಕರಣ) ದಾಖಲಿಸಿಕೊಂಡು ಸ್ವೀಕೃತಿ ನೀಡಲಾಗಿದೆ. ಎನ್‌ಸಿಆರ್ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದ್ದು, ಅಂತಿಮವಾಗಿ ಬರುವ ಆದೇಶದನ್ವಯ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಪೊಲೀಸ್ ಮೂಲಗಳು ಹೇಳಿವೆ.

ಇದನ್ನೂ ಓದಿ:  ನನ್ನ ಲೈಂಗಿಕ ಜೀವನ ಆಸಕ್ತಿದಾಯಕವಾಗಿಲ್ಲದ ಕಾರಣ ಕರಣ್​ ನನ್ನ ಕರೆಯಲ್ಲ: ತಾಪ್ಸಿ 

‘ನಿರ್ಮಾಪಕ ಭರತ್ ಅವರು ‘ಭಗವಾನ್ ಶ್ರೀ ಕೃಷ್ಣ ಪರಮಾತ್ಮ’ ಹೆಸರಿನ ಸಿನಿಮಾ ನಿರ್ಮಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ನಟ ಧ್ರುವನ್ ಅಭಿನಯಿಸುತ್ತಿದ್ದಾರೆ. ಹಣಕಾಸಿನ ತೊಂದರೆಯಿಂದಾಗಿ ಭರತ್, ಚಿತ್ರೀಕರಣ ಮಾಡುವುದು ತಡವಾಗಿದೆ. ಇದನ್ನು ಪ್ರಶ್ನಿಸಿದ್ದ ಧ್ರುವನ್, ಇದೇ ವಿಚಾರವನ್ನು ದರ್ಶನ್ ಅವರಿಗೆ ತಿಳಿಸಿದ್ದರು.’

‘ಭರತ್‌ ಅವರಿಗೆ ಇತ್ತೀಚೆಗೆ ಕರೆ ಮಾಡಿದ್ದ ದರ್ಶನ್, ಜೀವ ಬೆದರಿಕೆಯೊಡ್ಡಿದ್ದಾರೆ ಎನ್ನಲಾಗಿದೆ. ಇದಕ್ಕೆ ಸಂಬಂಧಪಟ್ಟ ಮೊಬೈಲ್ ಸಂಭಾಷಣೆ ವಿವರವನ್ನು ದೂರುದಾರ ನೀಡಿದ್ದಾರೆ. ಪ್ರಕರಣದ ತನಿಖೆಯಿಂದಲೇ ನಿಜಾಂಶ ತಿಳಿಯಲಿದೆ’ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.

ಓದಿ: BiggBoss Kannada OTTಗೆ ಚಾಲನೆ: 16 ಸ್ಪರ್ಧಿಗಳ ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು