ಬುಧವಾರ, ಸೆಪ್ಟೆಂಬರ್ 22, 2021
29 °C

‘ರಾಬರ್ಟ್‌’ ತಂಡದಿಂದ ನಾಳೆ ದರ್ಶನ್‌ ಅಭಿಮಾನಿಗಳಿಗೆ ಸಿಗಲಿರುವ ಸಿಹಿ ಸುದ್ದಿ ಏನು?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

‘ರಾಬರ್ಟ್‌’ –‘ಚಾಲೆಂಜಿಂಗ್‌ ಸ್ಟಾರ್’ ದರ್ಶನ್‌ ನಟನೆಯ 53ನೇ ಚಿತ್ರ. ಇದನ್ನು ನಿರ್ದೇಶಿಸಿರುವುದು ತರುಣ್‌ ಸುಧೀರ್. ಇತ್ತೀಚೆಗೆ ಚಿತ್ರಕ್ಕೆ ಬಂಡವಾಳ ಹೂಡಿರುವುದು ಉಮಾಪತಿ ಶ್ರೀನಿವಾಸ್‌ ಗೌಡ ಅವರ ಹುಟ್ಟುಹಬ್ಬದಂದು ದರ್ಶನ್‌ ಅವರ ಹೊಸ ಪೋಸ್ಟರ್‌ ಅನ್ನು ಬಿಡುಗಡೆ ಮಾಡಲಾಗಿತ್ತು.

ಸೆಪ್ಟೆಂಬರ್‌ 5ರ ಶಿಕ್ಷಕರ ದಿನಾಚರಣೆಯಂದು ಬೆಳಿಗ್ಗೆ 10ಗಂಟೆಗೆ ಚಿತ್ರದ ನಾಯಕಿ ಆಶಾ ಭಟ್‌ ಅವರ ಫಸ್ಟ್‌ ಲುಕ್‌ ಬಿಡುಗಡೆ ಮಾಡಲಾಗುವುದು ಎಂದು ನಿರ್ದೇಶಕ ತರುಣ್‌ ಸುಧೀರ್‌ ಟ್ವೀಟ್‌ ಮಾಡಿದ್ದಾರೆ.

ಆಶಾ ಭಟ್‌ ಅವರದು ಭದ್ರಾವತಿ. ವೃತ್ತಿಯಲ್ಲಿ ಮಾಡೆಲ್‌ ಆಗಿರುವ ಅವರಿಗೆ ಕನ್ನಡದಲ್ಲಿ ಇದು ಮೊದಲ ಚಿತ್ರ. ಆ್ಯಕ್ಷನ್‌, ಥ್ರಿಲ್ಲರ್‌ ಚಿತ್ರ ಇದು. ಕಳೆದ ಏಪ್ರಿಲ್‌ 9ರಂದೇ ಸಿನಿಮಾ ಬಿಡುಗಡೆಗೆ ದಿನಾಂಕವೂ ನಿಗದಿಯಾಗಿತ್ತು. ಕೋವಿಡ್‌–19 ಪರಿಣಾಮ ಬಿಡುಗಡೆಯ ದಿನಾಂಕ ಮುಂದಕ್ಕೆ ಹೋಗಿದೆ. ರಾಜ್ಯದಲ್ಲಿ ಚಿತ್ರಮಂದಿರಗಳ ಪ್ರದರ್ಶನ ಶುರುವಾದ ಬಳಿಕ ಸಿನಿಮಾ ಬಿಡುಗಡೆಗೆ ಚಿತ್ರತಂಡ ನಿರ್ಧರಿಸಿದೆ.

ಕಳೆದ ವರ್ಷ ದಚ್ಚು ನಟನೆಯ ‘ಯಜಮಾನ’, ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಒಡೆಯ’ ಸಿನಿಮಾಗಳು ಬಿಡುಗಡೆಯಾಗಿದ್ದವು. ಈ ಸಿನಿಮಾಗಳು ಗಲ್ಲಾಪೆಟ್ಟಿಗೆಯಲ್ಲೂ ಒಳ್ಳೆಯ ಕಲೆಕ್ಷನ್‌ ಕಂಡಿವೆ. ಹಾಗಾಗಿ, ‘ರಾಬರ್ಟ್‌’ ಮೇಲೂ ನಿರೀಕ್ಷೆ ದುಪ್ಪಟ್ಟಾಗಿದೆ.

ಇದಕ್ಕೆ ಅರ್ಜುನ್‌ ಜನ್ಯ ಸಂಗೀತ ನೀಡಿದ್ದಾರೆ. ಛಾಯಾಗ್ರಹಣ ಸುಧಾಕರ್‌ ಎಸ್‌. ರಾಜು ಅವರದು. ಕೆ.ಎಂ. ಪ್ರಕಾಶ್‌ ಸಂಕಲನ ನಿರ್ವಹಿಸಿದ್ದಾರೆ. ಟಾಲಿವುಡ್‌ನ ಜಗಪತಿ ಬಾಬು ಖಳನಟನಾಗಿ ನಟಿಸಿದ್ದಾರೆ. ವಿನೋದ್ ಪ್ರಭಾಕರ್, ಸೋನಾಲ್ ಮಾಂತೆರೊ, ಶಿವರಾಜ್ ಕೆ.ಆರ್. ಪೇಟೆ, ರವಿಕಿಶನ್, ಚಿಕ್ಕಣ್ಣ, ರವಿಶಂಕರ್ ತಾರಾಗಣದಲ್ಲಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು