ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ವಿಜಯಲಕ್ಷ್ಮಿ ಅವರು, ಪತಿ ದರ್ಶನ್ ಫೋಟೊವನ್ನು ಶೇರ್ ಮಾಡಿ, ಬೇಸರ ವ್ಯಕ್ತಪಡಿಸಿದ್ದಾರೆ. ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ದರ್ಶನ್ ಅವರ ಫೋಟೊಗೆ ‘ಇದು ಮರೆಯದ ಹಾಡು’ ಎನ್ನುವ ಹಾಡನ್ನು ಹಾಕಿ ಒಡೆದ ಹೃದಯದ ಎಮೋಜಿ ಹಾಕಿದ್ದಾರೆ.

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರಿಗೆ ಇನ್ನೂ ಒಂದು ವರ್ಷಗಳ ಕಾಲ ಜಾಮೀನು ನೀಡಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಜತೆಗೆ 60 ಪ್ರಮುಖ ಸಾಕ್ಷಿಗಳ ವಿಚಾರಣೆಯನ್ನು ಒಂದು ವರ್ಷ ದೊಳಗೆಮುಗಿಸಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ದರ್ಶನ್ ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಹಾಗೂ ವಿಜಯ್ ಬಿಷ್ಣೋಯ್ ಅವರ ಪೀಠವು, ವಿಚಾರಣಾ ನ್ಯಾಯಾಲಯ ದಿನನಿತ್ಯ ಸಾಕ್ಷಿಗಳ ವಿಚಾರಣೆ ನಡೆಸಿ ಒಂದು ವರ್ಷದೊಳಗೆ ವಿಚಾರಣೆ ಪೂರ್ಣಗೊಳಿಸಬೇಕು. ಬಳಿಕ ದರ್ಶನ್ ಅವರು ಮತ್ತೊಮ್ಮೆ ಜಾಮೀನಿಗಾಗಿ ಅರ್ಜಿ ಸಲ್ಲಿಸಬಹುದು ಎಂದು ಸೂಚನೆ ನೀಡಿದೆ. ದರ್ಶನ್ ಹಾಗೂ ಇತರ ಆರೋಪಿಗಳ ಜಾಮೀನನ್ನು ನ್ಯಾಯಪೀಠ 2025ರ ಆಗಸ್ಟ್ 14ರಂದು ರದ್ದುಗೊಳಿಸಿತ್ತು.

ತ್ವರಿತವಾಗಿ ವಿಚಾರಣೆ ನಡೆಯಬೇಕು. ಇಲ್ಲದಿದ್ದಲ್ಲಿ, ಒಂದು ವರ್ಷದ ನಂತರ ಜಾಮೀನು ಅರ್ಜಿಯನ್ನು ಪರಿಗಣನೆ ಮಾಡಲಾಗುತ್ತದೆ ಎಂದೂ ನ್ಯಾಯಪೀಠ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.