ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದರ್ಶನ್‌ ’ಕ್ರಾಂತಿ' ಚಿತ್ರೀಕರಣ: ನಾನು ಅಭಿಮಾನಿಗಳಿಗೆ ಋಣಿ ಎಂದ ದಾಸ!

ಅಕ್ಷರ ಗಾತ್ರ

ಚಂದನವನದ ನಟ ದರ್ಶನ್‌ ಅಭಿನಯದಬಹುನಿರೀಕ್ಷಿತ ಕ್ರಾಂತಿ ಸಿನಿಮಾದ ಚಿತ್ರೀಕರಣ ಸದ್ದಿಲ್ಲದೆ ಪೋಲ್ಯಾಂಡ್‌ನಲ್ಲಿ ನಡೆಯುತ್ತಿದೆ. ಈ ಬಗ್ಗೆ ದರ್ಶನ್‌ ಅಪ್ಡೇಟ್ ಕೊಟ್ಟಿದ್ದಾರೆ.

ಈಗಾಗಲೇ ಫಸ್ಟ್​ಲುಕ್ ಟೀಸರ್ ಕುತೂಹಲ ಹೆಚ್ಚಿಸಿದ್ದು ಶೂಟಿಂಗ್‌ ಮುಕ್ತಾಯ ಹಂತಕ್ಕೆ ಬಂದಿದೆ. ಮುಂದಿನ ವರ್ಷ ಆರಂಭದಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.

ಈ ಸಿನಿಮಾದಲ್ಲಿಅಕ್ಷರ ಕ್ರಾಂತಿಯ ಕಥೆ ಹೇಳಲಾಗಿದೆ. ಇದನ್ನು ಪ್ಯಾನ್​ಇಂಡಿಯಾ ಲೆವೆಲ್​ನಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ನಿರ್ಮಾಪಕಿ ಶೈಲಜಾ ನಾಗ್‌ ಹೇಳಿದ್ದಾರೆ. ಸದ್ಯ ಚಿತ್ರತಂಡ ಪೋಲ್ಯಾಂಡ್‌ನಲ್ಲಿಬೀಡು ಬಿಟ್ಟಿದೆ.

ಪೋಲ್ಯಾಂಡ್‌ನಲ್ಲಿ ಕ್ರಾಂತಿ ಸಿನಿಮಾದ ಶೂಟಿಂಗ್‌ ನಡೆಯುತ್ತಿರುವ ಬಗ್ಗೆ ನಟ ದರ್ಶನ್‌ ಟ್ವೀಟ್‌ ಮೂಲಕ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ.

ಚಿತ್ರದಲ್ಲಿನ ತಮ್ಮ ಹೊಸ ಲುಕ್‌ ಫೋಟೊವನ್ನು ಹಂಚಿಕೊಂಡಿರುವ ಅವರು, ‘ಕ್ರಾಂತಿ ಚಿತ್ರದ ಶೂಟಿಂಗ್ ಪೋಲ್ಯಾಂಡ್‌ನಲ್ಲಿ ಬಿರುಸಿನಿಂದ ಸಾಗುತ್ತಿದೆ. ನಲ್ಮೆಯ ಸೆಲೆಬ್ರಿಟಿಗಳು ತೋರುತ್ತಿರುವ ಪ್ರೀತಿಗೆ ನಾ ಸದಾ ಚಿರಋಣಿ‘ ಎಂದು ದರ್ಶನ್ ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

ದರ್ಶನ್‌ಗೆ ನಾಯಕಿಯಾಗಿ ಡಿಂಪಲ್ ಕ್ವೀನ್ ರಚಿತಾ ರಾಮ್ ನಟಿಸಿದ್ದಾರೆ. ವಿ. ಹರಿಕೃಷ್ಣ ಆ್ಯಕ್ಷನ್ ಕಟ್ ​ಹೇಳುವುದರ ಜೊತೆಗೆ ಸಂಗೀತ ನಿರ್ದೇಶನ ಮಾಡಿದ್ದಾರೆ.ನಿಮಾವನ್ನು ಶೈಲಜಾ ನಾಗ್‌ ಹಾಗೂ ಬಿ.ಸುರೇಶ್‌ ನಿರ್ಮಾಣ ಮಾಡಿದ್ದಾರೆ

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT