ದಾವಣಗೆರೆ: ‘ಮಂಡ್ಯ, ಮೈಸೂರು ಭಾಗದ ಹಳ್ಳಿ ಸೊಗಡನ್ನು ಮನರಂಜನಾತ್ಮಕವಾಗಿ ತೆರೆ ಮೇಲೆ ತಂದಿರುವ ‘ಲೋ ನವೀನ’ ಸಿನಿಮಾವು ಪ್ರೇಕ್ಷಕರ ಗಮನ ಸೆಳೆದು ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ’ ಎಂದು ಚಿತ್ರದ ನಟ ನವೀನ್ ಸಜ್ಜು ತಿಳಿಸಿದರು.

‘ಗ್ರಾಮೀಣ ಬದುಕಿನ ನೈಜ ಚಿತ್ರಣ, ಸ್ನೇಹ, ಪ್ರೀತಿ, ಕುಟುಂಬದ ಬಾಂಧವ್ಯ ಹಾಗೂ ಗ್ರಾಮೀಣ ಯುವಕರ ಜೀವನಶೈಲಿಯನ್ನು ಮನಮುಟ್ಟುವ ರೀತಿಯಲ್ಲಿ ಚಿತ್ರದಲ್ಲಿ ಕಟ್ಟಿಕೊಡಲಾಗಿದೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಧನುರ್ಧಾರಿ ಪವನ್ ಅವರು ಚಿತ್ರವನ್ನು ನಿರ್ದೇಶಿಸಿದ್ದು, ಕೀರ್ತಿಸ್ವಾಮಿ, ಬೆನ್ ಚಿಕ್ಕಸ್ವಾಮಿ ಹಾಗೂ ಎನ್ಎಸ್ ಸ್ಟುಡಿಯೋಸ್ ನಿರ್ಮಾಣದ ಹೊಣೆ ಹೊತ್ತಿದೆ. ಚಿತ್ರದಲ್ಲಿ 8 ಹಾಡುಗಳಿದ್ದು, ಸಿನಿಪ್ರೇಮಿಗಳ ಮನ ಗೆದ್ದಿವೆ’ ಎಂದರು.

‘ವರ್ಷಾ ಗಿರಿಧರ್, ರೇಷ್ಮಾ ಗೌಡ, ಪ್ರಕಾಶ್ ತುಮ್ಮಿನಾಡು, ಅಪೂರ್ವಶ್ರೀ, ಅಭಿಜಿತ್ ಗೌಡ, ಮಲ್ಲರಾಜು ಮಾರಸಿಂಗನಹಳ್ಳಿ ಸೇರಿದಂತೆ ಹಲವು ಕಲಾವಿದರು ಚಿತ್ರಕ್ಕಾಗಿ ಬಣ್ಣ ಹಚ್ಚಿದ್ದಾರೆ’ ಎಂದು ಹೇಳಿದರು.

‘ರಾಜ್ಯಾದ್ಯಂತ ಮೇ 15 ರಂದು ತೆರೆ ಕಂಡಿರುವ ಚಿತ್ರವು ಮೈಸೂರು, ಮಂಡ್ಯ ಹಾಗೂ ಇನ್ನಿತರ ಕಡೆಗಳಲ್ಲಿ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಕುಟುಂಬ ಸಮೇತರಾಗಿ ನೋಡುವಂತಹ ಚಿತ್ರ ಇದಾಗಿದೆ. ನಾಯಕನಾಗಿ ಅಭಿನಯಿಸಿದ ಮೊದಲ ಚಿತ್ರಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ’ ಎಂದು ಸಂತಸ ಹಂಚಿಕೊಂಡರು.

ಪ್ರಮುಖರಾದ ಗುಡ್ಡಪ್ಪ ಹಾಗೂ ಚಿತ್ರತಂಡದವರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-43-1836795581

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.