ಮಂಗಳವಾರ, ಜನವರಿ 25, 2022
24 °C

Video: ಅಗಲಿದ ಅಪ್ಪುಗೆ ಡೇವಿಡ್ ವಾರ್ನರ್ ವಿಶೇಷ ಶ್ರದ್ಧಾಂಜಲಿ

ಪ್ರಜಾವಾಣಿ ವೆಬ್‌ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರು ನಿಧನರಾಗಿ ಒಂದು ತಿಂಗಳು ಕಳೆದರೂ ಅಭಿಮಾನಿಗಳ ದುಃಖ ಇನ್ನೂ ಕಡಿಮೆ ಆಗಿಲ್ಲ. ಕೇವಲ ಕನ್ನಡಿಗರಷ್ಟೇ ಅಲ್ಲದೇ ದೇಶ ವಿದೇಶದ ಗಣ್ಯರು ಅಪ್ಪು ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.

ಇದೀಗ ಆಸ್ಟೇಲಿಯಾದ ಸ್ಫೋಟಕ ಬ್ಯಾಟ್ಸಮನ್, ಐಪಿಎಲ್ ಸ್ಟಾರ್ ಆಟಗಾರ ಡೇವಿಡ್ ವಾರ್ನರ್ ಅವರು ಅಪ್ಪುವನ್ನು ವಿಶೇಷವಾಗಿ ಸ್ಮರಿಸಿದ್ದಾರೆ.

ಇದನ್ನೂ ಓದಿ: ‘ಗಂಧದಗುಡಿ’ಯಲ್ಲಿ ಎದ್ದು ಬಂದ ಪುನೀತ್ ರಾಜ್‌ಕುಮಾರ್: ಅಪ್ಪು ಕನಸಿನ ಯೋಜನೆ ಅನಾವರಣ

ಇನ್‌ಸ್ಟಾಗ್ರಾಂನಲ್ಲಿ ‘ರಾಜಕುಮಾರ’ ಚಿತ್ರದ ಗೊಂಬೆ ಹೇಳುತೈತೆ ಹಾಡಿಗೆ ಫೇಸ್ ಆ್ಯಪ್ ಮೂಲಕ ಮುಖ ಬದಲಿಸಿ ಅಪ್ಪುಗೆ ವಿಶಿಷ್ಟವಾಗಿ ಶೃದ್ದಾಂಜಲಿ ಸಲ್ಲಿಸಿದ್ದಾರೆ. ವಿಡಿಯೊ ಹಂಚಿಕೊಂಡು ‘ರೆಸ್ಪೆಕ್ಟ್’ ಎಂದು ಬರೆದುಕೊಂಡಿದ್ದಾರೆ.

ಡೇವಿಡ್ ವಾರ್ನರ್ ಅವರು ಭಾರತದಲ್ಲಿ ಐಪಿಎಲ್‌ ಟೂರ್ನಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದಲ್ಲದೇ, ಇಲ್ಲಿನ ಸಂಸ್ಕೃತಿ ಬಗ್ಗೆ ವಿಶೇಷ ಪ್ರೀತಿ ಹೊಂದಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು