ಮಂಗಳವಾರ, ಜನವರಿ 19, 2021
23 °C

ಹುಟ್ಟುಹಬ್ಬದ ಸಂಭ್ರಮದಲ್ಲಿ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಲಿವುಡ್‌ನ ಖ್ಯಾತ ನಟಿ ದೀಪಿಕಾ ಪಡುಕೋಣೆ ಇಂದು ತಮ್ಮ 35ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಇವರ ಹುಟ್ಟುಹಬ್ಬಕ್ಕೆ ಬಾಲಿವುಡ್‌ನ ಖ್ಯಾತ ನಟ–ನಟಿಯರು, ಅಭಿಮಾನಿಗಳು, ಸ್ನೇಹಿತರು ಶುಭಾಶಯ ಕೋರಿದ್ದಾರೆ.

ನಟಿ ಆಲಿಯಾ ಭಟ್ ದೀಪಿಕಾಗೆ ಮೊದಲು ಶುಭಾಶಯ ತಿಳಿಸಿದ್ದಾರೆ. ಅಲಿಯಾ ಇತ್ತೀಚೆಗೆ ದೀಪಿಕಾ ಜೊತೆ ರಾಜಸ್ಥಾನದ ರಾಷ್ಟ್ರೀಯ ಉದ್ಯಾನದಲ್ಲಿ ಸಮಯ ಕಳೆದಿದ್ದರು. ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ದೀಪಿಕಾಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿರುವ ಆಲಿಯಾ ‘ಸೌಂದರ್ಯ ಹಾಗೂ ಸಾಮರ್ಥ್ಯಕ್ಕೆ ನೀವು ನಿಜವಾದ ಸ್ಫೂರ್ತಿ’ ಎಂದಿದ್ದಾರೆ.

‘ಹ್ಯಾಪಿ ಬರ್ತ್‌ಡೇ ಡಿಪಿ! ನೀವು ಬಾಹ್ಯ ಹಾಗೂ ಆಂತರಿಕವಾಗಿ ಸೌಂದರ್ಯ ಹಾಗೂ ಸಾಮರ್ಥ್ಯಕ್ಕೆ ನಿಜವಾದ ಸ್ಫೂರ್ತಿಯಾಗಿದ್ದೀರಿ. ನಿಮ್ಮ ಜೀವನದಲ್ಲಿ ಇನ್ನಷ್ಟು ಅದ್ಭುತಗಳು ನಡೆಯಲಿ, ಲವ್‌ ಯೂ’ ಎಂದು ಬರೆದುಕೊಂಡಿದ್ದಾರೆ.

ಕತ್ರಿನಾ ಕೈಫ್ ಕೂಡ ದೀಪಿಕಾಗೆ ಶುಭಾಶಯ ತಿಳಿಸಿದ್ದು ಅವರ ಫೋಟೊವನ್ನು ಹಂಚಿಕೊಂಡಿದ್ದಾರೆ. ನಟಿ ಸೋಹಾ ಅಲಿ ಖಾನ್ ಕೂಡ ಶುಭಾಶಯ ಕೋರಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು