ಭಾನುವಾರ, ನವೆಂಬರ್ 1, 2020
20 °C

ಡಗ್ಸ್ ಪ್ರಕರಣದಲ್ಲಿ ಕೇಳಿ ಬರುತ್ತಿದೆ ದೀಪಿಕಾ ಪಡುಕೋಣೆ ಹೆಸರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಟ ಸುಶಾಂತ್ ಸಿಂಗ್ ರಜಪೂತ್‌ ಸಾವಿನ ನಂತರ ಬೆಳಕಿಗೆ ಬಂದ ಡ್ರಗ್ಸ್ ಪ್ರಕರಣವು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಅಲ್ಲದೇ ಈ ಪ್ರಕರಣದಲ್ಲಿ ದಿನಕ್ಕೊಂದು ಸಿನಿತಾರೆಯರ ಹೆಸರು ಹೊರ ಬರುತ್ತಿದೆ.

ಸದ್ಯದ ಸುದ್ದಿಯ ಪ್ರಕಾರ ನಟಿ ದೀಪಿಕಾ ಪಡುಕೋಣೆ ಹೆಸರು ಕೂಡ ಈ ಪ್ರಕರಣದೊಂದಿಗೆ ತಳುಕು ಹಾಕಿಕೊಂಡಿದೆ ಎನ್ನಲಾಗುತ್ತಿದೆ. ಈ ಕುರಿತು ಎನ್‌ಸಿಬಿ ತನಿಖೆ ಚುರುಕುಗೊಂಡಿದ್ದು ವಾಟ್ಸ್‌ಆ್ಯಪ್‌ ಸಂದೇಶದ ಆಧಾರದ ಮೇಲೆ ಈ ಆರೋಪ ಕೇಳಿ ಬರುತ್ತಿದೆ. ಈ ಸಂದೇಶದಲ್ಲಿ ದೀಪಿಕಾ ‘ಕೆ’ ಎಂಬ ಹೆಸರಿನ ವ್ಯಕ್ತಿಯ ಜೊತೆ ‘ಮಾಲ್‌’, ‘ಹ್ಯಾಷ್‌’ ಕೇಳಿ ಸಂದೇಶ ಕಳುಹಿಸಿದ್ದರು. ದೀಪಿಕಾ ಮ್ಯಾನೇಜರ್ ಕರೀಷ್ಮಾ ಪ್ರಕಾಶ್ ಅವರ ಹೆಸರು ಈ ಚಾಟ್‌ನಲ್ಲಿ ಕೇಳಿ ಬಂದಿದ್ದು ಎನ್‌ಸಿಬಿ ವಿಚಾರಣೆಗೆ ಕರೆದಿದ್ದಾರೆ ಎನ್ನಲಾಗುತ್ತಿದೆ.

ದೀಪಿಕಾ ಹಾಗೂ ಕರೀಷ್ಮಾ ನಡುವಿನ ಚಾಟ್ 2017ರ ಅಕ್ಟೋಬರ್ 28 ರಂದು ನಡೆದಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು