ಶನಿವಾರ, ಜುಲೈ 2, 2022
23 °C

ದೀಪಿಕಾ ಪಡುಕೋಣೆ ಸೇರಿದಂತೆ ಬಾಲಿವುಡ್‌ನ ಈ 7 ನಟಿಯರು ಪಡೆಯುವ ಸಂಭಾವನೆ ಎಷ್ಟು?

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬಾಲಿವುಡ್‌ನಲ್ಲಿ ಹೀರೊಗಳು ಮತ್ತು ಹೀರೊಯಿನ್‌ಗಳ ವೇತನದ ನಡುವೆ ತಾರತಮ್ಯವಿದೆ ಎಂಬ ಕುರಿತು ಚರ್ಚೆಯಾಗುವುದು ಕೆಲವೊಮ್ಮೆ ವರದಿಯಾಗುತ್ತಿರುತ್ತದೆ. ಆದರೆ ಈಗೀಗ ಪರಿಸ್ಥಿತಿ ಬದಲಾಗಿದೆ. ನಟನೆಯಲ್ಲೂ ಪುರುಷರಿಗೆ ಸಮನಾಗಿ ನಿಲ್ಲುವ ನಟಿಯರು ಹೆಚ್ಚು ಸಂಭಾವನೆಯನ್ನೂ ಪಡೆಯುತ್ತಿದ್ದಾರೆ ಎಂದು ‘ಬಾಲಿವುಡ್ ಡಾಟ್ ಕಾಂ’ ವರದಿ ಮಾಡಿದೆ.

ದೀಪಿಕಾ ಪಡುಕೋಣೆ, ಆಲಿಯಾ ಭಟ್ ಸೇರಿದಂತೆ ಬಾಲಿವುಡ್‌ನ ಪ್ರಮುಖ ನಟಿಯರು ಪ್ರತಿ ಸಿನಿಮಾಗೆ ಪಡೆಯುತ್ತಿರುವ ಸಂಭಾವನೆಯ ಬಗ್ಗೆಯೂ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ವರದಿಯ ಪ್ರಕಾರ, ದೀಪಿಕಾ ಪಡುಕೋಣೆ ಅವರು ಪ್ರತಿ ಸಿನಿಮಾಗೆ ₹15–30 ಕೋಟಿವರೆಗೆ ಸಂಭಾವನೆ ಪಡೆಯುತ್ತಾರೆ ಎನ್ನಲಾಗಿದೆ.

ಬಾಲಿವುಡ್‌ನಲ್ಲಿ ಅತಿಹೆಚ್ಚು ಸಂಭಾವನೆ ಪಡೆಯುವ ನಟಿಯರ ಯಾದಿಯಲ್ಲಿ ಕಂಗನಾ ರನೌತ್ ಕೂಡ ಒಬ್ಬರು. ಇವರು ತಮ್ಮ ಹಿಟ್ ಸಿನಿಮಾ ‘ತಲೈವಿ’ಯಲ್ಲಿನ ನಟನೆಗಾಗಿ ₹27 ಕೋಟಿ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗಿದೆ.

ವಿಶ್ವ ಮಟ್ಟದಲ್ಲಿ ಗುರುತಿಸಿಕೊಂಡಿರುವ ಪ್ರಿಯಾಂಕಾ ಚೋಪ್ರಾ ಕೂಡ ಭಾರತದ ಚಿತ್ರೋದ್ಯಮದಲ್ಲಿ ಅತಿಹೆಚ್ಚು ಸಂಭಾವನೆ ಪಡೆಯುವ ನಟಿಯಾಗಿದ್ದಾರೆ. ತಮ್ಮ ಮುಂದಿನ ಬಾಲಿವುಡ್ ಸಿನಿಮಾಗೆ ಅವರು ₹15–20 ಕೋಟಿ ಸಂಭಾವನೆ ಪಡೆಯಲಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಆಲಿಯಾ ಭಟ್ ಬಾಲಿವುಡ್‌ನಲ್ಲಿ ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿದ್ದಾರೆ. ಅವರು ಪ್ರತಿ ಸಿನಿಮಾಗೆ ₹23 ಕೋಟಿಯಂತೆ ಸಂಭಾವನೆಗೆ ಬೇಡಿಕೆ ಇಡುತ್ತಿದ್ದಾರೆ ಎನ್ನಲಾಗಿದೆ. ಗಂಗೂಬಾಯಿ ಕಾಠಿಯಾವಾಡಿ ಸಿನಿಮಾದ ಯಶಸ್ಸಿನೊಂದಿಗೆ ಇವರ ತಾರಾ ವರ್ಚಸ್ಸು ಮತ್ತಷ್ಟು ಹೆಚ್ಚಾಗಿದೆ.

ಕತ್ರೀನಾ ಕೈಫ್ ಸಹ ಪ್ರತಿ ಸಿನಿಮಾಕ್ಕೆ ₹15–20 ಕೋಟಿಯವರೆಗೆ ಬೇಡಿಕೆ ಇಡುತ್ತಿದ್ದಾರೆ ಎನ್ನುತ್ತದೆ ವರದಿ.

ಸಿನಿಮಾವೊಂದರಲ್ಲಿ ನಟನೆಗಾಗಿ ಕರೀನಾ ಕಪೂರ್ ಅವರು ₹12 ಕೋಟಿಗೆ ಬೇಡಿಕೆ ಇಟ್ಟಿದ್ದಾರೆ ಎಂದು ಇತ್ತೀಚೆಗೆ ವರದಿಯಾಗಿತ್ತು. ಈ ಬಗ್ಗೆ ಅಧಿಕೃತ ಮಾಹಿತಿ ಇಲ್ಲವಾದರೂ ಅವರು ಅತಿಹೆಚ್ಚು ಸಂಭಾವನೆ ಪಡೆಯುವ ಬಾಲಿವುಡ್ ನಟಿಯರಲ್ಲೊಬ್ಬರು ಎಂಬುದರಲ್ಲಿ ಅನುಮಾನವಿಲ್ಲ.

ಅನುಷ್ಕಾ ಶರ್ಮಾ ಬಾಲಿವುಡ್‌ನಲ್ಲಿ ವೇತನ ತಾರತಮ್ಯದ ಬಗ್ಗೆ ಹಲವು ಬಾರಿ ಪ್ರಸ್ತಾಪಿಸಿದ್ದಾರೆ. ಇವರು ಪ್ರತಿ ಸಿನಿಮಾಗೆ ₹7–10 ಕೋಟಿವರೆಗೆ ಸಂಭಾವನೆ ಪಡೆಯುತ್ತಾರೆ ಎನ್ನಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು