ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸೆಪ್ಟೆಂಬರ್ 2024’: ಮೊದಲ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ– ರಣವೀರ್ ದಂಪತಿ

Published 29 ಫೆಬ್ರುವರಿ 2024, 5:43 IST
Last Updated 29 ಫೆಬ್ರುವರಿ 2024, 5:43 IST
ಅಕ್ಷರ ಗಾತ್ರ

ಬೆಂಗಳೂರು: ಬಾಲಿವುಡ್‌ನ ತಾರಾ ಜೋಡಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ದೀಪಿಕಾ ಗರ್ಭಿಣಿಯಾಗಿದ್ದು, ದಂಪತಿ ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ‘ಸೆಪ್ಟೆಂಬರ್ 2024’ ಎಂದು ಬರೆದುಕೊಂಡು ಮಗುವಿನ ಉಡುಪಿನ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಸೆಪ್ಟೆಂಬರ್‌ನಲ್ಲಿ ದೀಪಿಕಾ ಮಗುವಿಗೆ ಜನ್ಮ ನೀಡಲಿದ್ದಾರೆ ಎಂಬುದನ್ನು ಈ ಮೂಲಕ ದಂಪತಿ ಬಹಿರಂಗಪಡಿಸಿದ್ದಾರೆ.

ದೀಪಿಕಾ ಪಡುಕೋಣೆ ಗರ್ಭಿಣಿಯಾಗಿರಬಹುದು ಎಂಬ ಊಹಾಪೋಹಗಳು ಈ ಹಿಂದೆ ಹರಿದಾಡಿದ್ದವು.

77ನೇ ಬ್ರಿಟಿಷ್ ಅಕಾಡೆಮಿ ಫಿಲ್ಮ್ ಅವಾರ್ಡ್ಸ್ (ಬಿಎಎಫ್‌ಟಿಎ) ಕಾರ್ಯಕ್ರಮದಲ್ಲಿ ರೆಡ್ ಕಾರ್ಪೆಟ್ ಮೇಲೆ ನಡೆಯುವ ಸಂದರ್ಭ ಅವರು ತಮ್ಮ ಹೊಟ್ಟೆಯ ಭಾಗವನ್ನು ಮರೆಮಾಚಿದ್ದರು. ಆ ಬಳಿಕ ಅವರು ಗರ್ಭಿಣಿ ಇರಬಹುದು ಎಂಬ ವದಂತಿಗಳು ಹುಟ್ಟಿಕೊಂಡಿದ್ದವು.

ರಾಮಲೀಲಾ ಚಿತ್ರೀಕರಣದ ಸಂದರ್ಭ ಪರಿಚಿತರಾಗಿದ್ದ ರಣವೀರ್ ಸಿಂಗ್ ಮತ್ತು ದೀಪಿಕಾ 5 ವರ್ಷ ಡೇಟಿಂಗ್ ಬಳಿಕ 2018ರಲ್ಲಿ ವಿವಾಹವಾಗಿದ್ದರು.

ಮಗುವನ್ನು ಪಡೆಯುವ ಬಗ್ಗೆ ಖಾಸಗಿ ವಾಹಿನಿಯೊಂದರ ಪ್ರಶ್ನೆಗೆ ಉತ್ತರಿಸಿದ್ದ ಅವರು, ರಣವೀರ್ ಮತ್ತು ನನಗೆ ಮಕ್ಕಳೆಂದರೆ ಬಹಳ ಇಷ್ಟ. ಆ ಬಗ್ಗೆ ನಾವಿಬ್ಬರೂ ಯೋಚಿಸುತ್ತಿದ್ದೇವೆ ಎಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT