ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ತಾರಾ ಜೋಡಿಯು ಭಾನುವಾರದಂದು ಈ ವಿಷಯವನ್ನು ಸಾಮಾಜಿಕ ಮಾಧ್ಯಮದ ಮೂಲಕ ಬಹಿರಂಗಪಡಿಸಿದ್ದಾರೆ.

ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಇನ್ಸ್ಟಾಗ್ರಾಮ್ನಲ್ಲಿ ಜಂಟಿಯಾಗಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ಅವರ ಮಗಳು ದುವಾ ಗರ್ಭಧಾರಣೆಯ ಪಾಸಿಟಿವ್ ಪರೀಕ್ಷಾ ಕಿಟ್ ಅನ್ನು ಹಿಡಿದುಕೊಂಡಿದ್ದಾರೆ. ಈ ಚಿತ್ರಕ್ಕೆ ರಣವೀರ್ ಹಾಗೂ ದೀಪಿಕಾ ಪಡುಕೋಣೆ ಎರಡು ಕಣ್ಣಿನ ಎಮೋಜಿಯ ಶೀರ್ಷಿಕೆ ನೀಡಿದ್ದಾರೆ.

ದೀಪಿಕಾ ಮತ್ತು ರಣವೀರ್ ಸಿಂಗ್ 2018ರ ನವೆಂಬರ್ 14ರಂದು ಇಟಲಿಯ ಲೇಕ್ ಕೊಮೊದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ವಿವಾಹವಾಗಿದ್ದರು. ಈ ಜೋಡಿಯು ಕೊಂಕಣಿ ಪರಂಪರೆ ಸಿಂಧಿ ವಿವಾಹ ಸಂಪ್ರದಾಯದ ಪ್ರಕಾರ ಮದುವೆಯಾಗಿದ್ದರು.

ಅಂದಹಾಗೆ, ಈ ಜೋಡಿಯ ಸಂಬಂಧವು 2013ರಲ್ಲಿ 'ಗೋಲಿಯೋಂ ಕಿ ರಾಸಲೀಲಾ ರಾಮ್-ಲೀಲಾ' ಚಿತ್ರದ ಸೆಟ್ನಲ್ಲಿ ಪ್ರಾರಂಭಗಿತ್ತು. ಹಲವು ವರ್ಷಗಳ ಪ್ರೀತಿಯ ಬಳಿಕ, 2015ರಲ್ಲಿ ರಹಸ್ಯವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಅಂತಿಮವಾಗಿ 2018ರಲ್ಲಿ ವಿವಾಹವಾಗಿದ್ದರು. ಈ ಜೋಡಿಯು 2024ರಲ್ಲಿ ತಮ್ಮ ಮೊದಲ ಮಗುವನ್ನು ಸ್ವಾಗತಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.