ಶುಕ್ರವಾರ, ಡಿಸೆಂಬರ್ 9, 2022
22 °C

ನಟಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಚೇತರಿಕೆ: ವೈದ್ಯರು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಇಲ್ಲಿನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ.

ಎರಡು ದಿನಗಳ ಹಿಂದೆ ದೀಪಿಕಾ ತಮ್ಮ ನಿವಾಸದಲ್ಲಿ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು ಎಂದು ದೀಪಿಕಾ ಅವರ ಮ್ಯಾನೇಜರ್‌ ಹೇಳಿದ್ದಾರೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆ ಆಗಿಲ್ಲ.

ವೈದ್ಯರು ಅವರಿಗೆ ಹಲವಾರು ಟೆಸ್ಟ್‌ಗಳನ್ನು ಮಾಡಿಸಿದ್ದಾರೆ ಎಂದು ಪಿಂಕ್‌ವಿಲ್ಲಾ ಡಾಟ್‌.ಕಾಂ ವರದಿ ಮಾಡಿದೆ. ಸದ್ಯ ಅವರು ಚೇತರಿಸಿಕೊಂಡಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಈ ಹಿಂದೆ ದೀಪಿಕಾ ಪಡುಕೋಣೆ ಹೈದರಾಬಾದ್ನಲ್ಲಿ ಶೂಟಿಂಗ್ ಸಮಯದ ವೇಳೆ ಅಸ್ವಸ್ಥರಾಗಿ, ಆಸ್ಪತ್ರೆಗೆ ದಾಖಲಾಗಿದ್ದರು. ಈ ಬಗ್ಗೆ ಚಿತ್ರತಂಡವೇ ಅಧಿಕೃತ ಮಾಹಿತಿ ನೀಡಿತ್ತು. ಕೆಲವು ದಿನಗಳವರೆಗೆ ಶೂಟಿಂಗ್‌ ಮುಂದೂಡಲಾಗಿತ್ತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು