ಮಂಗಳವಾರ, ಡಿಸೆಂಬರ್ 7, 2021
20 °C

ಮತ್ತೊಂದು ಹಾಲಿವುಡ್ ಚಿತ್ರಕ್ಕೆ ಸಜ್ಜಾದ ದೀಪಿಕಾ ಪಡುಕೋಣೆ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

Deepika Padukone Instagram Screengrab

ಬೆಂಗಳೂರು: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮತ್ತೊಂದು ಹಾಲಿವುಡ್ ಚಿತ್ರಕ್ಕೆ ಬಣ್ಣ ಹಚ್ಚಲು ಸಜ್ಜಾಗಿದ್ದಾರೆ.

ವಿನ್ ಡೀಸೆಲ್ ಜತೆಗೆ 2017ರಲ್ಲಿ ನಟಿ ದೀಪಿಕಾ ಪಡುಕೋಣೆ, ‘ಎಕ್ಸ್‌ಎಕ್ಸ್‌ಎಕ್ಸ್‌: ದಿ ರಿಟರ್ನ್ ಆಫ್ ಕ್ಸಾಂಡರ್ ಕೇಜ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

ಈ ಬಾರಿ ದೀಪಿಕಾ, ಎಸ್‌ಟಿಎಕ್ಸ್ ಫಿಲ್ಮ್ಸ್ ಮತ್ತು ಟೆಂಪಲ್ ಹಿಲ್ ಪ್ರೊಡಕ್ಷನ್ಸ್ ಸಹಯೋಗದಲ್ಲಿ ಹೊಸ ಹಾಲಿವುಡ್ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದಾಗಿ ನೀಡಿರುವ ಹೇಳಿಕೆ ಆಧರಿಸಿ, ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಜತೆಗೆ ಇಂಗ್ಲಿಷ್ ದೈನಿಕದಲ್ಲಿ ಹೊಸ ಹಾಲಿವುಡ್ ಚಿತ್ರದ ಬಗ್ಗೆ ಪ್ರಕಟವಾಗಿರುವ ವರದಿಯನ್ನು ಕೂಡ ದೀಪಿಕಾ ತಮ್ಮ ಇನ್‌ಸ್ಟಾಗ್ರಾಂ ಸ್ಟೋರೀಸ್‌ನಲ್ಲಿ ಹಂಚಿಕೊಂಡಿದ್ದಾರೆ.

ದೀಪಿಕಾ ಗೆಳೆಯರು ನೂತನ ಚಿತ್ರಕ್ಕೆ ಶುಭಹಾರೈಸಿದ್ದು, ಅರ್ಹವಾಗಿಯೇ ಈ ಅವಕಾಶ ಒಲಿದು ಬಂದಿದೆ ಎಂದು ಅಭಿನಂದಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು