ಶುಕ್ರವಾರ, ಜುಲೈ 1, 2022
27 °C

ಕಾನ್ ಚಿತ್ರೋತ್ಸವದಲ್ಲಿ ತೀರ್ಪುಗಾರರಾಗಲಿದ್ದಾರೆ ದೀಪಿಕಾ ಪಡುಕೋಣೆ

ಪಿಟಿಐ Updated:

ಅಕ್ಷರ ಗಾತ್ರ : | |

DH FILE

ಮುಂಬೈ: ಬಾಲಿವುಡ್ ನಟಿ ದೀಪಿಕಾ ಪಡುಕೋಣೆಯವರು 2022ರ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ತೀರ್ಪುಗಾರರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

ಮೇ 17ರಿಂದ 28ರವರೆಗೆ 75ನೇ ಕಾನ್ ಚಲನಚಿತ್ರೋತ್ಸವ ನಡೆಯಲಿದೆ ಎಂದು ಟ್ವಿಟರ್ ಮೂಲಕ ಪ್ರಕಟಿಸಲಾಗಿದ್ದು, ಫ್ರೆಂಚ್ ನಟ ವಿನ್ಸೆಂಟ್ ಲಿಂಡನ್ ಅವರು ಮುಖ್ಯ ತೀರ್ಪುಗಾರರಾಗಿರಲಿದ್ದಾರೆ.

21 ಸಿನಿಮಾಗಳು ಪ್ರಶಸ್ತಿ ಸುತ್ತಿನಲ್ಲಿದ್ದು, ದೀ‍ಪಿಕಾ ಅವರು ಎಂಟು ಮಂದಿ ತೀರ್ಪುಗಾರರ ತಂಡದಲ್ಲಿರುತ್ತಾರೆ. ಮೇ 28ರಂದು ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಘೋಷಣೆ ಕಾರ್ಯಕ್ರಮ ಇರಲಿದೆ.

ದೀ‍ಪಿಕಾ ಪಡುಕೋಣೆ ಈ ಮೊದಲು ಜಿಯೋ ಮಾಮಿ ಮುಂಬೈ ಫಿಲ್ಮ್ ಫೆಸ್ಟಿವಲ್‌ನಲ್ಲಿ ಎರಡು ವರ್ಷ ಕಾಲ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು