ಬುಧವಾರ, ಜನವರಿ 29, 2020
29 °C

ದೀಪಿಕಾ ಪಡುಕೋಣೆಗೆ ಸಲ್ಮಾನ್‌ ಜತೆ ನಟಿಸುವಾಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಲಿವುಡ್‌ನ ಖ್ಯಾತ ನಟಿ ದೀಪಿಕಾ ಪಡುಕೋಣೆ, ನಟ ಸಲ್ಮಾನ್‌ ಖಾನ್‌ ಜೊತೆ ನಟಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಸರಿಯಾದ ಸಿನಿಮಾ ಸಿಕ್ಕರೆ ಸಲ್ಮಾನ್‌ ಜೊತೆ ನಟಿಸಲು ಸಿದ್ಧ ಎಂದು ಘೋಷಿಸಿದ್ದಾರೆ. 

ಸದ್ಯ ದೀಪಿಕಾ ಪಡುಕೋಣೆ ತಮ್ಮ ಬಹುನಿರೀಕ್ಷಿತ ಚಿತ್ರ ‘ಛಪಾಕ್‌’ ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರವನ್ನು ಮೇಘನಾ ಗುಲ್ಜಾರ್‌ ನಿರ್ದೇಶನ ಮಾಡಿದ್ದು, ಇದರಲ್ಲಿ ವಿಕ್ರಮ್‌ ಮಸ್ಸೆ ನಟಿಸಿದ್ದಾರೆ. ಚಿತ್ರ ಜನವರಿ 10ರಂದು ಬಿಡುಗಡೆಯಾಗಲಿದೆ.

ಪ್ರಚಾರ ಸಮಯದಲ್ಲಿ ಸಂದರ್ಶಕರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಭವಿಷ್ಯದಲ್ಲಿ ಸಲ್ಮಾನ್‌ ಖಾನ್‌ ಜೊತೆ ನಟಿಸುವ ಸಾಧ್ಯತೆ ಬಗ್ಗೆ ಬಾಯಿಬಿಟ್ಟಿದ್ದಾರೆ. ‘ಸಲ್ಮಾನ್‌ ಹಾಗೂ ನಾನು ಯಾವಾಗ ಒಟ್ಟಿಗೆ ನಟಿಸುತ್ತೇವೆ ಎಂದು ಅಭಿಮಾನಿಗಳು ಕಾಯುತ್ತಲೇ ಇದ್ದಾರೆ ಎಂಬುದು ನನಗೆ ಗೊತ್ತು. ನಾವಿಬ್ಬರೂ ಜೊತೆಯಾಗಿ ಸಿನಿಮಾ ಮಾಡಬೇಕೆಂದು ನಮಗೂ ಇಷ್ಟವಿದೆ. ಸೂಕ್ತ ಚಿತ್ರಕತೆ ಸಿನಿಮಾ ಸಿಕ್ಕರೆ ಖಂಡಿತಾ ನಟಿಸುತ್ತೇವೆ. ನಾನು ‘ಹಮ್‌ ದಿಲ್‌ ದೆ ಚುಕೆ ಸನಮ್‌’ ಚಿತ್ರದ ದೊಡ್ಡ ಅಭಿಮಾನಿ. ಇತ್ತೀಚೆಗೆ ನನಗೆ ಯಾವತ್ತೂ ಅಂತಹ ಅವಕಾಶ ಬಂದಿಲ್ಲ, ಆದರೆ ಅವರ ಜೊತೆ ಸಿನಿಮಾ ಮಾಡಲು ನನಗಿಷ್ಟ’ ಎಂದು ಅವರು ಹೇಳಿದ್ದಾರೆ.

ಅನನ್ಯಾ ಪಾಂಡೆ, ಸಿದ್ಧಾಂತ್‌ ಚತುರ್ವೇದಿ ಜೊತೆ ತಾವು ನಟಿಸುತ್ತಿರುವ ಇನ್ನೂ ಹೆಸರಿಡದ ಸಿನಿಮಾ ಚಿತ್ರೀಕರಣ ಮಾರ್ಚ್‌ನಲ್ಲಿ ಆರಂಭವಾಗಲಿದೆ ಎಂಬ ಸಂಗತಿಯನ್ನೂ ಇದೇ ಸಂದರ್ಭದಲ್ಲಿ ಬಹಿರಂಗಪಡಿಸಿದ್ದಾರೆ. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು