ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'83' ಬಿಡುಗಡೆಗೆ ಮುನ್ನ ಮುಂಬೈನ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ದೀಪಿಕಾ ಭೇಟಿ

Last Updated 24 ಡಿಸೆಂಬರ್ 2021, 10:22 IST
ಅಕ್ಷರ ಗಾತ್ರ

ಮುಂಬೈ:'83' ಚಿತ್ರ ಬಿಡುಗಡೆಯಾವುದಕ್ಕೂ ಮುನ್ನ ಬಾಲಿವುಡ್‌ ನಟಿದೀಪಿಕಾ ಪಡುಕೋಣೆ ಅವರು ಮುಂಬೈನ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ಆಶೀರ್ವಾದ ಪಡೆದಿದ್ದಾರೆ.

ಸಾಂಪ್ರದಾಯಿಕ ಉಡುಗೆ ತೊಟ್ಟಿದ್ದ ದೀಪಿಕಾ ಅವರುಭದ್ರತೆಯ ನಡುವೆ ದೇವಸ್ಥಾನಕ್ಕೆ ತೆರಳಿದ್ದಾರೆ.

'83' ಚಿತ್ರವು ಇಂದು(ಶುಕ್ರವಾರ) ಬಿಡುಗಡೆಯಾಗಿದ್ದು, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ.

ಕಪಿಲ್‌ ದೇವ್‌ ನಾಯಕತ್ವದಲ್ಲಿ ಟೀಮ್ ಇಂಡಿಯಾ ವಿಶ್ವಕಪ್ ಗೆದ್ದ ರೋಚಕ ಕಥೆಯನ್ನು ‘83‘ ಹೊಂದಿದೆ. ಹಿಂದಿ, ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಈ ಚಿತ್ರವು ತೆರೆಕಂಡಿದೆ.

ಕಪಿಲ್ ದೇವ್ ಪಾತ್ರದಲ್ಲಿ ರಣವೀರ್ ಸಿಂಗ್ ಹಾಗೂ ಕಪಿಲ್‌ ದೇವ್‌ ಅವರ ಪತ್ನಿ ರೋಮಿ ದೇವ್ ಪಾತ್ರದಲ್ಲಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ದೀಪಿಕಾ ಅವರು ಈ ಚಿತ್ರದ ಸಹ ನಿರ್ಮಾಪಕಿಯೂ ಆಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT