ಮಂಗಳವಾರ, ಸೆಪ್ಟೆಂಬರ್ 21, 2021
27 °C
ದೀಪಿಕಾ ಪೋಸ್ಟ್‌ಗೆ ರಣವೀರ್ ಕಾಮೆಂಟ್

ದೀಪು ವರ್ಕೌಟ್‌, ರಣವೀರ್ ಕಾಮೆಂಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಹುದಿನಗಳ ನಂತರ ದೀಪಿಕಾ ಪಡುಕೋಣೆ ವರ್ಕೌಟ್ ಮಾಡುತ್ತಿರುವ ಚಿತ್ರವನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಪತ್ನಿಯ ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ರಣವೀರ್ ಸಿಂಗ್ ‘ನಿಮ್ಮ ರೂಪ ವೃದ್ಧಿಗೊಳ್ಳಲು ನಾನು ಸಹಾಯ ಮಾಡುತ್ತೇನೆ’ ಎಂದು ತಮಾಷೆಯಾಗಿ ಕಾಲೆಳೆದಿದ್ದಾರೆ. 

ದಟ್ಟ ಗುಲಾಬಿ ಬಣ್ಣದ ಮೇಲುಡುಗೆ, ಕಪ್ಪು ಪ್ಯಾಂಟ್ ಧರಿಸಿ ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿರುವ ಮೂರು ಭಿನ್ನ ಬಗೆಯ ಚಿತ್ರಗಳನ್ನು ದೀಪಿಕಾ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ‘ಇವತ್ತು ನಾನು ಪುಷ್‌ಅಪ್ ಮಾಡಿದೆ. ನಿಜ ಹೇಳಬೇಕೆಂದರೆ ಹೀಗೆ ಮಾಡುವಾಗ ನಾನು ಬಿದ್ದುಬಿಟ್ಟೆ. ಆದರೆ, ಕೈಯ್ಯೂರಿ ನಾನು ಮತ್ತೆ ಎದ್ದುಕುಳಿತೆ’ ಎಂದು ಬರೆದುಕೊಂಡಿದ್ದಾರೆ. 

ಆರು ವರ್ಷಗಳ ಡೇಟಿಂಗ್ ನಂತರ ದೀಪಿಕಾ ಮತ್ತು ರಣವೀರ್ ಮದುವೆಯಾಗಿದ್ದು, ಇಬ್ಬರೂ ಪರಸ್ಪರ ಒಬ್ಬರಿಗೊಬ್ಬರು ಕಾಲೆಳೆಯುತ್ತಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಿದ್ಧಿಯಾಗಿದ್ದಾರೆ. ಇವರಿಬ್ಬರ ಜೋಡಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದು, ಅವರನ್ನು ನಿರಂತರವಾಗಿ ಇನ್‌ಸ್ಟಾಗ್ರಾಂ ಮತ್ತು ಟ್ವಿಟರ್‌ಗಳಲ್ಲಿ ಫಾಲೋ ಮಾಡುತ್ತಿದ್ದಾರೆ.

ಇತ್ತೀಚೆಗಷ್ಟೇ ದೀಪಿಕಾ ಮೆಟ್ ಗಾಲಾ ಕಾರ್ಯಕ್ರಮದಲ್ಲಿ ವಿಚಿತ್ರ ವೇಷ ಧರಿಸಿ ಸುದ್ದಿಯಾಗಿದ್ದರು. ಶೀಘ್ರದಲ್ಲೇ ದೀಪು, ಕೇನ್ ಸಿನಿಮೋತ್ಸವದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಆ್ಯಸಿಡ್ ಸಂತ್ರಸ್ತೆ ಲಕ್ಷ್ಮೀ ಜೀವನಾಧಾರಿತ ‘ಚಾಪಕ್’ ಸಿನಿಮಾದಲ್ಲಿ ದೀಪಿಕಾ ನಟಿಸುತ್ತಿದ್ದು, ಈ ಸಿನಿಮಾವನ್ನು ಮೇಘನಾ ಗುಲ್ಜಾರ್ ನಿರ್ದೇಶಿಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು