ಸೋಮವಾರ, ಆಗಸ್ಟ್ 8, 2022
23 °C

ಆರ್‌ಆರ್‌ಆರ್‌ ಸಿನಿಮಾದ ಡಿಲೀಟ್ ಆಗಿರುವ ಸೀನ್ ವೈರಲ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

dh file

ಬೆಂಗಳೂರು: ದಕ್ಷಿಣ ಭಾರತ ಚಿತ್ರರಂಗ ಮಾತ್ರವಲ್ಲದೆ, ಬಾಲಿವುಡ್‌ನಲ್ಲೂ ಅತಿಹೆಚ್ಚಿನ ಗಳಿಕೆ ದಾಖಲಿಸಿದ ಆರ್‌ಆರ್‌ಆರ್‌ ಚಿತ್ರ ಮತ್ತೆ ಸುದ್ದಿಯಲ್ಲಿದೆ.

ಆರ್‌ಆರ್‌ಆರ್‌ ಸಿನಿಮಾದ ಡಿಲೀಟ್ ಆಗಿರುವ ಸೀನ್‌ಗಳು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿವೆ.

ಆರ್‌ಆರ್‌ಆರ್‌ ಸಿನಿಮಾದ ಕಲಾವಿದ ವಿಶ್ವನಾಥ್ ಸುಂದರಮ್ ಅವರು ಟ್ವಿಟರ್‌ನಲ್ಲಿ, ಚಿತ್ರದಲ್ಲಿ ಬಳಸದೇ ಇರುವ ಸೀನ್‌ಗಳ ಫೋಟೊಗಳನ್ನು ಹಂಚಿಕೊಂಡಿದ್ದರು.

ಈ ಫೋಟೊಗಳು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಸಿನಿಮಾ ನಿರ್ದೇಶಕ ಎಸ್.ಎಸ್. ರಾಜಮೌಳಿ ಅವರನ್ನು ಪ್ರಶ್ನೆ ಮಾಡುತ್ತಿದ್ದಾರೆ.

ಈ ಸನ್ನಿವೇಶವನ್ನು ಚಿತ್ರದಿಂದ ತೆಗೆದುಹಾಕಿರುವುದು ಯಾಕೆ ಮತ್ತು ಯಾವ ಸಂದರ್ಭದಲ್ಲಿ ಈ ದೃಶ್ಯಗಳನ್ನು ಬಳಸಿಕೊಳ್ಳುವ ಇರಾದೆಯಿತ್ತು ಎನ್ನುವುದನ್ನು ಅಭಿಮಾನಿಗಳು ಕೇಳುತ್ತಿದ್ದು, ಈ ದೃಶ್ಯಗಳೂ ಸಿನಿಮಾದಲ್ಲಿ ಇರುತ್ತಿದ್ದರೆ ಚಿತ್ರ ಇನ್ನಷ್ಟು ಉತ್ತಮವಾಗಿ ಮೂಡಿಬರುತ್ತಿತ್ತು ಎಂಬ ಚರ್ಚೆ ನಡೆದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು