ಕಾಳಿ ದೇವತೆ ಕೈಯಲ್ಲಿ ಸಿಗರೇಟ್: ನಿರ್ದೇಶಕಿ ಲೀನಾ ವಿರುದ್ಧ ಎಫ್‌ಐಆರ್

ಬೆಂಗಳೂರು: ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ನಟಿ, ನಿರ್ದೇಶಕಿ, ಕವಯತ್ರಿ ಲೀನಾ ಮಣಿಮೇಕಲೈ ವಿರುದ್ಧ ದೆಹಲಿ ಮತ್ತು ಉತ್ತರಪ್ರದೇಶದಲ್ಲಿ ಎಫ್‌ಐಆರ್ ದಾಖಲಾಗಿದೆ.
ದೆಹಲಿಯಲ್ಲಿ ವಕೀಲರೊಬ್ಬರು ಹಾಗೂ ಉತ್ತರಪ್ರದೇಶದಲ್ಲಿ ಐಎಫ್‌ಎಸ್‌ಒ ಸಂಘಟನೆ ನೀಡಿರುವ ದೂರಿನ ಅನ್ವಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
Super thrilled to share the launch of my recent film - today at @AgaKhanMuseum as part of its “Rhythms of Canada”
Link: https://t.co/RAQimMt7LnI made this performance doc as a cohort of https://t.co/D5ywx1Y7Wu@YorkuAMPD @TorontoMet @YorkUFGS
Feeling pumped with my CREW❤️ pic.twitter.com/L8LDDnctC9
— Leena Manimekalai (@LeenaManimekali) July 2, 2022
ಲೀನಾ ‘ಕಾಳಿ‘ ಎಂಬ ಸಾಕ್ಷ್ಯಚಿತ್ರ ನಿರ್ಮಾಣ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಪೋಸ್ಟರ್ ಹಂಚಿಕೊಂಡಿದ್ದು ಅದರಲ್ಲಿ ಹಿಂದೂ ದೇವತೆ ಕಾಳಿ ಮಾತೆಯು ಸಿಗರೇಟ್ ಸೇದುತ್ತಿರುವ ಹಾಗೂ ಕೈಯಲ್ಲಿ ಎಲ್‌ಜಿಬಿಟಿಕ್ಯೂ(LGBTQ) ಸಮುದಾಯದ ಧ್ವಜವನ್ನು ಹಿಡಿದಿರುವ ಅವತಾರದಲ್ಲಿ ತೋರಿಸಲಾಗಿದೆ.
ಇದನ್ನೂ ಓದಿ: ’ಕಾಳಿ’ ಮಾತೆ ಕೈಯಲ್ಲಿ ಸಿಗರೇಟು; ವಿವಾದಕ್ಕೀಡಾದ ನಿರ್ದೇಶಕಿ ಲೀನಾ ವಿರುದ್ಧ ದೂರು
ಈ ಪೋಸ್ಟರ್ ಹಾಗೂ ಲೀನಾ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು ಅವರನ್ನು ಕೂಡಲೇ ಬಂಧಿಸಬೇಕು ಎಂಬ ಆಗ್ರಹ ವ್ಯಕ್ತವಾಗಿದೆ.
ಕೆನಾಡದ ಅಗಾ ಖಾನ್ ಮ್ಯೂಸಿಯಂನಲ್ಲಿ ‘ರಿದಮ್ಸ್ ಆಫ್ ಕೆನಡಾ‘ ಸಂಸ್ಥೆ ಈ ಸಾಕ್ಷ್ಯಚಿತ್ರವನ್ನು ಲಾಂಚ್ ಮಾಡಿದೆ. ಈ ಚಿತ್ರವನ್ನು ನಿರ್ಬಂಧಿಸಬೇಕು ಎಂದು ಇಲ್ಲಿನ ಹಿಂದೂ ಸಂಘಟನೆಗಳು ಕೆನಡಾ ರಾಯಭಾರಿ ಕಚೇರಿಗೆ ಮನವಿ ಸಲ್ಲಿಸಿವೆ. ಲೀನಾ ಅವರು ಪ್ರಸ್ತುತ ಕೆನಡಾದಲ್ಲಿ ನೆಲೆಸಿದ್ದಾರೆ.
ಓದಿ...
ಸಿಗರೇಟ್ ಸೇದುತ್ತಿರುವ ’ಕಾಳಿ’ ಮಾತೆ: ನಿರ್ದೇಶಕಿ ಲೀನಾ ವಿರುದ್ಧ ಭಾರೀ ಆಕ್ರೋಶ
ಕಾಳಿ ಮಾತೆ ಕೈಯಲ್ಲಿ ಸಿಗರೇಟು: ವಿವಾದದ ಬಗ್ಗೆ ಭಯವಿಲ್ಲ ಎಂದ ನಿರ್ದೇಶಕಿ ಲೀನಾ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.