ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ ಅಕ್ರಮ ವರ್ಗಾವಣೆ ಪ್ರಕರಣ: ಮತ್ತೆ ಪೊಲೀಸ್ ವಿಚಾರಣೆಗೆ ಜಾಕ್ವೆಲಿನ್ ಫರ್ನಾಂಡಿಸ್

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಸೋಮವಾರ ಮತ್ತೆ ವಿಚಾರಣೆಗೆ ಹಾಜರಾಗಲಿದ್ದಾರೆ.
Last Updated 19 ಸೆಪ್ಟೆಂಬರ್ 2022, 6:43 IST
ಅಕ್ಷರ ಗಾತ್ರ

ನವದೆಹಲಿ: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಪೊಲೀಸರು ಸಮನ್ಸ್ ನೀಡಿದ್ದಾರೆ.

ಸುಕೇಶ್ ಚಂದ್ರಶೇಖರ್ ₹200 ಕೋಟಿ ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್ ಹೆಸರು ಕೂಡ ಕೇಳಿಬಂದಿತ್ತು. ಅಲ್ಲದೆ ನಟಿ, ಸುಕೇಶ್ ಅವರಿಂದ ದುಬಾರಿ ಮೊತ್ತದ ಉಡುಗೊರೆ ಪಡೆದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ದೆಹಲಿ ಪೊಲೀಸ್‌ ಇಲಾಖೆಯ ಆರ್ಥಿಕ ಅಪರಾಧಗಳ ತಡೆ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲು ಜಾಕ್ವೆಲಿನ್‌ಗೆ ಸೂಚಿಸಲಾಗಿದೆ.

ಕಳೆದ ಬುಧವಾರವೂ ಅವರು ದೆಹಲಿ ಪೊಲೀಸ್‌ ಎದುರು ಹಾಜರಾಗಿ ವಿಚಾರಣೆ ಎದುರಿಸಿದ್ದರು.

ಹಣ ಅಕ್ರಮ ವರ್ಗಾವಣೆ ಮತ್ತು ವಂಚನೆ ಪ್ರಕರಣದಲ್ಲಿ ಬೆಂಗಳೂರು ಮೂಲದ ಸುಕೇಶ್ ಚಂದ್ರಶೇಖರ್ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT