‘ದೇವರ–1 ಭಾಗ’ ಚಿತ್ರದ ಮೂಲಕ ಬಾಲಿವುಡ್ ನಟಿ ಜಾಹ್ನವಿ ಕಪೂರ್ ಇದೇ ಮೊದಲ ಬಾರಿಗೆ ತೆಲುಗು ಚಿತ್ರರಂಗಕ್ಕೆ ಹೆಜ್ಜೆ ಇಟ್ಟಿದ್ದಾರೆ. ಜೊತೆಗೆ ಬಾಲಿವುಡ್‌ನ ಖ್ಯಾತ ನಟ ಸೈಫ್ ಅಲಿ ಖಾನ್ ಖಳನಟನಾಗಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಈ ಚಿತ್ರಕ್ಕೆ ಕೊರಟಾಲ ಶಿವ ಆ್ಯಕ್ಷನ್ ಕಟ್ ಹೇಳಿದ್ದಾರೆ. ಯುವಸುಧಾ ಆರ್ಟ್ಸ್ ಮತ್ತು ಎನ್‌ಟಿಆರ್ ಆರ್ಟ್ಸ್‌ನಡಿ ಸುಧಾಕರ್ ಮಿಕ್ಕಿಲಿನೇನಿ ಮತ್ತು ಹರಿಕೃಷ್ಣ, ನಂದಮೂರಿ ಕಲ್ಯಾಣ ರಾಮ್ ನಿರ್ಮಿಸಿದ್ದಾರೆ.
ಈ ಚಿತ್ರ ತೆಲುಗು, ತಮಿಳು, ಹಿಂದಿ, ಮಲಯಾಳಂ ಮತ್ತು ಕನ್ನಡ ಐದು ಭಾಷೆಗಳಲ್ಲಿ ಶುಕ್ರವಾರ ಬಿಡುಗಡೆಯಾಗಿದೆ.