ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸೆಪ್ಟೆಂಬರ್ 27ಕ್ಕೆ ‘ದೇವರ‘ ಬಿಡುಗಡೆ: ಬಂತು ಮತ್ತೊಂದು ಟ್ರೇಲರ್

ಬಹಳ ದಿನಗಳ ನಂತರ ಜೂನಿಯರ್ ಎನ್‌ಟಿಆರ್ ಅವರನ್ನು ತೆರೆಯ ಮೇಲೆ ನೋಡಲು ಅವರ ಅಭಿಮಾನಿಗಳು ಕಾತರರಾಗಿದ್ದಾರೆ.
Published : 22 ಸೆಪ್ಟೆಂಬರ್ 2024, 9:57 IST
Last Updated : 22 ಸೆಪ್ಟೆಂಬರ್ 2024, 9:57 IST
ಫಾಲೋ ಮಾಡಿ
Comments

ಬೆಂಗಳೂರು: ಆರ್‌ಆರ್‌ಆರ್‌ ನಂತರ ಜೂನಿಯರ್ ಎನ್‌ಟಿಆರ್ ಅವರ ಬಹುನಿರೀಕ್ಷಿತ ‘ದೇವರ‘ ಸಿನಿಮಾ ತೆರೆಗೆ ಅಪ್ಪಳಿಸಲು ಸಜ್ಜಾಗಿದೆ. ಈ ಸಿನಿಮಾ ಇದೇ ಸೆಪ್ಟೆಂಬರ್ 27 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಈ ಹಿನ್ನೆಲೆಯಲ್ಲಿ ದೇವರ ಸಿನಿಮಾದ ರಿಲೀಸ್ ಟ್ರೇಲರ್ ಅನ್ನು ಇಂದು ಯೂಟ್ಯೂಬ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಬಹಳ ದಿನಗಳ ನಂತರ ಜೂನಿಯರ್ ಎನ್‌ಟಿಆರ್ ಅವರನ್ನು ತೆರೆಯ ಮೇಲೆ ನೋಡಲು ಅವರ ಅಭಿಮಾನಿಗಳು ಕಾತರರಾಗಿದ್ದಾರೆ.

ತೆಲುಗು, ತಮಿಳು, ಹಿಂದಿ, ಕನ್ನಡ ಹಾಗೂ ಮಲಯಾಳಂ ಭಾಷೆಯ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಸದ್ಯ ಈ ಟ್ರೇಲರ್ ಯೂಟ್ಯೂಬ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಸೃಷ್ಟಿಸಿದೆ.

ಕೊರಟಾಲ ಶಿವ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಈ ಚಿತ್ರದಲ್ಲಿ ಜ್ಯೂ. ಎನ್‌ಟಿಆರ್‌ ವಿಭಿನ್ನವಾದ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

‘ದೇವರ’ ಚಿತ್ರದ ಮೂಲಕ ಬಾಲಿವುಡ್ ನಟಿ ಜಾಹ್ನವಿ ಕಪೂರ್ ಇದೇ ಮೊದಲ ಬಾರಿಗೆ ತೆಲುಗು ಚಿತ್ರರಂಗಕ್ಕೆ ಹೆಜ್ಜೆ ಇಟ್ಟಿದ್ದಾರೆ. ಜೊತೆಗೆ ಬಾಲಿವುಡ್‌ನ ಖ್ಯಾತ ನಟ ಸೈಫ್ ಅಲಿ ಖಾನ್ ಖಳನಟನಾಗಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ದೊಡ್ಡ ತಾರಾಬಳಗವೇ ಚಿತ್ರದಲ್ಲಿದೆ ಎಂದಿದೆ ಚಿತ್ರತಂಡ. ಯುವಸುಧಾ ಆರ್ಟ್ಸ್ ಮತ್ತು ಎನ್‌ಟಿಆರ್‌ ಆರ್ಟ್ಸ್‌ನಡಿ ಸುಧಾಕರ್ ಮಿಕ್ಕಿಲಿನೇನಿ ಮತ್ತು ಹರಿಕೃಷ್ಣ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. 

2024ರ ಸೆಪ್ಟೆಂಬರ್ 27 ರಂದು ಐದು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ‘ದೇವರ’ ಬಿಡುಗಡೆಯಾಗಲಿದ್ದು, ಈ ಚಿತ್ರಕ್ಕೆ ಅನಿರುದ್ಧ್ ಸಂಗೀತ, ರತ್ನವೇಲು ಛಾಯಾಚಿತ್ರಗ್ರಹಣ ಮತ್ತು ಶ್ರೀಕರ್ ಪ್ರಸಾದ್ ಅವರ ಸಂಕಲನವಿದೆ.

ರಾಜಮೌಳಿ ಅವರ ಆರ್‌ಆರ್‌ಆರ್‌ ಸಿನಿಮಾದ ನಂತರ ಇದೇ ಮೊದಲ ಬಾರಿಗೆ ಜೂನಿಯರ್ ಎನ್‌ಟಿಆರ್ ಅವರ ಹೊಸ ಸಿನಿಮಾ ಬಿಡುಗಡೆಯಾಗುತ್ತಿದ್ದು ಈ ಸಿನಿಮಾ ಆರ್‌ಆರ್‌ಆರ್‌ ದಾಖಲೆಯನ್ನು ಮುರಿಯಲಿದೆಯೇ ಎಂಬುದನ್ನು ನೋಡಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT