ಸೋಮವಾರ, ಸೆಪ್ಟೆಂಬರ್ 26, 2022
24 °C

‘ಧಮಾಕ’ ಚಿತ್ರದ ಹಾಡಿನಲ್ಲಿ ಸಿದ್ದು, ಪ್ರಿಯಾ ಹೆಜ್ಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ಧಮಾಕ’ ದಲ್ಲಿ ಮಿಂಚಿದ್ದಾರೆ ಸಿದ್ದು ಮೂಲಿಮನಿ ಹಾಗೂ ಪ್ರಿಯಾ ಆಚಾರ್‌. ಹಾಸ್ಯನಟ ಶಿವರಾಜ್‌ ಕೆ.ಆರ್‌.ಪೇಟೆ ನಾಯಕರಾಗಿರುವ ‘ಧಮಾಕ’ ಚಿತ್ರದ ಹಾಡಿನಲ್ಲಿ ಈ ಜೋಡಿ ಕಾಣಿಸಿಕೊಂಡಿದೆ. ಅಂದಹಾಗೆ ಇದು ಚಿತ್ರದ ಎರಡನೇ ಹಾಡು. ‘ನಾನು ಹೋಗೋಕು ಮೊದ್ಲು...’ ಸಾಲುಗಳು ಕೇಳಲು ಮಧುರವಾಗಿವೆ.  

ಚಿತ್ರದ ನಿರ್ದೇಶಕ ಲಕ್ಷ್ಮೀ ರಮೇಶ್ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ವಿಜಯ್ ಪ್ರಕಾಶ್ ಹಾಗೂ ಮಾನಸ ಹೊಳ್ಳ ಧ್ವನಿಯಾಗಿದ್ದು, ವಿಕಾಸ್ ವಸಿಷ್ಠ ಸಂಗೀತ ನಿರ್ದೇಶನ ಮಾಡಿದ್ದಾರೆ. ಹಾಡಿಗೆ ಸಿನಿರಸಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಂದಹಾಗೆ ಇದು ಲಕ್ಷ್ಮೀ ರಮೇಶ್‌ ನಿರ್ದೇಶನದ ಮೊದಲ ಚಿತ್ರ.

ಪ್ರಕಾಶ್‌ ತೂಮಿನಾಡ್, ಮೋಹನ್ ಜುನೇಜಾ, ಕೋಟೆ ಪ್ರಭಾಕರ್, ಮೈಕೋ ನಾಗರಾಜ್, ಅರುಣಾ ಬಾಲರಾಜ್ ತಾರಾಗಣದಲ್ಲಿದ್ದಾರೆ.

ಎಸ್‌ಆರ್‌ಎಸ್‌ ಮೀಡಿಯಾ ಪ್ರೊಡಕ್ಷನ್ಸ್‌ ಮತ್ತು ನಂದಿ ಎಂಟರ್‌ಟೇನ್‌ಮೆಂಟ್ಸ್ ಬ್ಯಾನರ್‌ ಅಡಿಯಲ್ಲಿ ಈ ಸಿನಿಮಾ ನಿರ್ಮಾಣಗೊಂಡಿದೆ. ಹಾಲೇಶ್ ಅವರ ಛಾಯಾಗ್ರಹಣ, ವಿನಯ್ ಕೂರ್ಗ್ ಸಂಕಲನ ಧಮಾಕಾ ಸಿನಿಮಾದಲ್ಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು