ಶನಿವಾರ, ಅಕ್ಟೋಬರ್ 8, 2022
23 °C

ಡಾಲಿ ಧನಂಜಯ 26ನೇ ಚಿತ್ರ ತೆಲುಗಿನಲ್ಲಿ: ಸತ್ಯದೇವ್ ಜೊತೆ ಕ್ರೈಂ ಸಿನಿಮಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

‘ಪುಷ್ಪ’ ಸಿನಿಮಾ ಮೂಲಕ ತೆಲುಗು ಸಿನಿಲೋಕಕ್ಕೂ ಪರಿಚಿತರಾದ ಡಾಲಿ ಧನಂಜಯ ಈಗ ಬಹುಭಾಷಾ ನಟ. ಹೀಗಾಗಿ ಧನಂಜಯ ಅವರಿಗೆ ಬೇಡಿಕೆ ಹೆಚ್ಚಿದೆ. ಇದೀಗ ಕನ್ನಡ ಹಾಗೂ ತೆಲುಗು ಎರಡು ಭಾಷೆ ಚಿತ್ರಕ್ಕೆ ನಟರಾಕ್ಷಸ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇದು ಡಾಲಿ ಧನಂಜಯ್ ನಟಿಸಲಿರುವ 26ನೇ ಸಿನಿಮಾ. ಈ ಚಿತ್ರದಲ್ಲಿ ಧನಂಜಯ್ ಜೊತೆಗೆ ತೆಲುಗಿನ ಪ್ರತಿಭಾನ್ವಿತ ನಟ ಸತ್ಯದೇವ್ ಕೂಡ ಮುಖ್ಯಭೂಮಿಕೆಯಲ್ಲಿ ಬಣ್ಣ ಹಚ್ಚಿದ್ದಾರೆ. ವಿಶೇಷ ಅಂದರೆ ಇದು ಸತ್ಯದೇವ್ ನಟಿಸುತ್ತಿರುವ 26ನೇ ಕೂಡ ಹೌದು..

ಈ ಹಿಂದೆ ತೆಲುಗಿನಲ್ಲಿ ಪೆಂಗ್ವಿನ್ ಸಿನಿಮಾ ಮಾಡಿದ್ದ ಈಶ್ವರ್ ಕಾರ್ತಿಕ್ ಡಾಲಿ-ಸತ್ಯದೇವ್ ಬಣ್ಣ ಹಚ್ಚಿರುವ 26ನೇ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕ್ರೈಮ್ ಕಥೆಯನ್ನೊಳಗೊಂಡ ಈ ಚಿತ್ರವನ್ನು ಓಲ್ಡ್‌ ಟೌನ್ ಪಿಕ್ಚರ್ಸ್ ಸಂಸ್ಥೆಯಡಿ ಬಾಲ ಸುಂದರಂ ಮತ್ತು ದಿನೇಶ್ ಸುಂದರಂ ನಿರ್ಮಾಣ ಮಾಡುತ್ತಿದ್ದಾರೆ.

ಟಗರು ಸಿನಿಮಾ ಖ್ಯಾತಿಯ ಚರಣ್ ರಾಜ್ ಸಂಗೀತ, ಮಣಿಕಂಠನ್ ಕೃಷ್ಣಮಾಚಾರಿ ಛಾಯಾಗ್ರಹಣ, ಅನಿಲ್ ಕ್ರಿಶ್ ಸಂಕಲನ ಸಿನಿಮಾಕ್ಕಿದ್ದು, ಶೀಘ್ರದಲ್ಲೇ ಟೈಟಲ್ ರಿವೀಲ್ ಮಾಡಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು