ಸೋಮವಾರ, ಜನವರಿ 24, 2022
21 °C

ಅಸುರನ್ ಚಿತ್ರದ ಪಾತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ಪಡೆದ ಧನುಷ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

Dhanush in Asuran DH File

ಬೆಂಗಳೂರು: ವೇಟ್ರಿಮಾರನ್ ನಿರ್ದೇಶನದ 'ಅಸುರನ್' ಚಿತ್ರಕ್ಕಾಗಿ ರಾಷ್ಟ್ರಪ್ರಶಸ್ತಿ ಪಡೆದಿದ್ದ ನಟ ಧನುಷ್ ಅವರಿಗೆ ಬ್ರಿಕ್ಸ್ ಫಿಲ್ಮ್ ಫೆಸ್ಟಿವಲ್‌ನಲ್ಲಿ 'ಅತ್ಯುತ್ತಮ ನಟ' ಮನ್ನಣೆ ದೊರೆತಿದೆ.

ಗೋವಾದ ಪಣಜಿಯಲ್ಲಿ ನಡೆದ ಇಂಟರ್‌ನ್ಯಾಶನಲ್ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾ ಸಮಾರಂಭದ ಜತೆಗೇ ಬ್ರಿಕ್ಸ್ ಫಿಲ್ಮ್ ಫೆಸ್ಟಿವಲ್ ಕೂಡ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಧನುಷ್ ಅವರಿಗೆ ಪ್ರಶಸ್ತಿ ಘೋಷಿಸಲಾಗಿದೆ.

ಬ್ರೆಜಿಲ್ ಚಿತ್ರ 'ಆನ್ ವೀಲ್ಸ್'ನಲ್ಲಿನ ನಟನೆಗಾಗಿ ಲಾರಾ ಬೊಲೊರಿನಿ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಕೂಡ ಈ ಸಂದರ್ಭದಲ್ಲಿ ನೀಡಲಾಗಿದೆ.

ಬ್ರಿಕ್ಸ್ ಚಿತ್ರೋತ್ಸವದಲ್ಲಿ ಭಾರತ ಮಾತ್ರವಲ್ಲದೆ. ಬ್ರೆಜಿಲ್, ರಷ್ಯಾ, ಚೀನಾ ಮತ್ತು ದಕ್ಷಿಣ ಆಫ್ರಿಕಾ ಕೂಡ ಭಾಗವಹಿಸಿದ್ದವು.

2019ರಲ್ಲಿ ಬಿಡುಗಡೆಯಾಗಿದ್ದ 'ಅಸುರನ್ ಚಿತ್ರ'ದಲ್ಲಿ ಧನುಷ್ ಜತೆಗೆ ಮಂಜು ವಾರಿಯರ್ ನಟಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು