ಮಂಗಳವಾರ, 26 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಾಮನ’ನಾಗಿ ಬಂದ ಧನ್ವೀರ್ 

Published 3 ಆಗಸ್ಟ್ 2023, 22:30 IST
Last Updated 3 ಆಗಸ್ಟ್ 2023, 22:30 IST
ಅಕ್ಷರ ಗಾತ್ರ

ನಟ ಧನ್ವೀರ್ ಗೌಡ ಹಾಗೂ ರೀಷ್ಮಾ ನಾಣಯ್ಯ ಅಭಿನಯದ ‘ವಾಮನ’ ಚಿತ್ರದ ಮೊದಲ ಹಾಡು ಇತ್ತೀಚೆಗಷ್ಟೆ ಬಿಡುಗಡೆಯಾಗಿದೆ. ‘ವಾ..ವಾ..ವಾ..ವಾಮನ’ ಹಾಡಿಗೆ ಶಶಾಂಕ್ ಶೇಷಗಿರಿ ಧ್ವನಿಯಾಗಿದ್ದು, ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನವಿದೆ.

ಈಕ್ವಿನಾಕ್ಸ್ ಗ್ಲೋಬಲ್‌ ಎಂಟರ್‌ಟೈನ್‌ಮೆಂಟ್‌ ಬ್ಯಾನರ್‌ ಅಡಿಯಲ್ಲಿ ಚೇತನ್‌ ಗೌಡ ನಿರ್ಮಿಸಿರುವ ಈ ಸಿನಿಮಾವನ್ನು ಶಂಕರ್‌ ರಾಮನ್‌ ನಿರ್ದೇಶಿಸಿದ್ದಾರೆ. ‘ಕಥೆಯಲ್ಲಿ ಬರುವ ಪಾತ್ರಗಳಿಗಷ್ಟೇ ಕೌಂಟರ್ ಕೊಡುತ್ತಿರುವುದು, ಬೇರೆ ಯಾರಿಗೂ ಅಲ್ಲ. ನಾಯಕ ಇಲ್ಲಿ ರಾವಣ, ದುರ್ಯೋಧನ ಇಬ್ಬರನ್ನೂ ಆವರಿಸಿಕೊಳ್ಳುತ್ತಾನೆ. ಚಿತ್ರದಲ್ಲಿ ನಾಲ್ಕ ಫೈಟ್‌ಗಳಿವೆ’ ಎಂದು ನಿರ್ದೇಶಕ ಶಂಕರ್‌ ರಾಮನ್‌ ತಿಳಿಸಿದರು.

‘ಇದು ನನ್ನ ಮೂರನೇ ಸಿನಿಮಾ. ಟೈಟಲ್ ಸಾಂಗ್ ರಿಲೀಸ್ ಮಾಡಿದ್ದೇವೆ. ಸಿನಿಮಾದಲ್ಲಿ ಒಳ್ಳೆ ಕಂಟೆಂಟ್ ಇದೆ’ ಎಂದರು ನಾಯಕ ಧನ್ವೀರ್. 

‘ನನ್ನ ಪಾತ್ರದ ಹೆಸರು ನಂದಿನಿ. ಸರಳವಾಗಿರುವ ಮುದ್ದಾದ ಹುಡುಗಿಯ ಪಾತ್ರ. ಪ್ರೀತಿಯಲ್ಲಿಯೇ ಗುದ್ದಾಟ ಕೂಡ ಇದೆ’ ಎಂದು ರೀಷ್ಮಾ ನಾಣಯ್ಯ ತಿಳಿಸಿದರು.

ತಾರಾ, ಸಂಪತ್‌, ಆದಿತ್ಯ ಮೆನನ್‌, ಶಿವರಾಜ್ ಕೆ.ಆರ್. ಪೇಟೆ, ಅವಿನಾಶ್‌, ಅಚ್ಯುತ್‌ ಕುಮಾರ್‌, ಕಾಕ್ರೋಚ್‌ ಸುಧಿ, ಭೂಷಣ್‌ ಮುಂತಾದವರು ನಟಿಸಿದ್ದಾರೆ. ಮಹೇಂದ್ರ ಸಿಂಹ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನ ಚಿತ್ರಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT