ಬುಧವಾರ, ಮೇ 25, 2022
29 °C

ಧನ್ಯಾ ರಾಮ್‌ಕುಮಾರ್ ನಟನೆಯ ‘ನಿನ್ನ ಸನಿಹಕೆ’ ಏಪ್ರಿಲ್‌ನಲ್ಲಿ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

‘ನಿನ್ನ ಸನಿಹಕೆ’ ಸಿನಿಮಾ ಸೆಟ್ಟೇರಿದಾಗಿನಿಂದ ಈ ಸಿನಿಮಾದ ಬಗ್ಗೆ ಕುತೂಹಲ ದುಪ್ಪಟ್ಟಾಗಿದೆ. ಯಾಕೆಂದರೆ ಇದರ ಮೂಲಕ ರಾಜ್‌ಕುಮಾರ್ ಕುಟುಂಬದ ಮೊದಲ ಹೆಣ್ಣು ಕುಡಿಯೊಬ್ಬರು ನಾಯಕಿಯಾಗಿ ಚಂದನವನಕ್ಕೆ ಕಾಲಿರಿಸುತ್ತಿದ್ದಾರೆ. ವರನಟ ರಾಜ್‌ಕುಮಾರ್ ಮೊಮ್ಮಗಳು, ನಟರಾದ ರಾಮ್‌ಕುಮಾರ್ ಮಗಳು ಧನ್ಯಾ ರಾಮ್‌ಕುಮಾರ್‌ ನಿನ್ನ ಸನಿಹಕೆ ಚಿತ್ರದ ನಾಯಕಿ. ಸೂರಜ್‌ ಗೌಡ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವ ಈ ಸಿನಿಮಾದಲ್ಲಿ ತಾವೇ ಮುಖ್ಯಪಾತ್ರದಲ್ಲೂ ನಟಿಸಿದ್ದಾರೆ. ಸದ್ಯ ಸಿನಿಮಾ ಬಿಡುಗಡೆಯ ಹಂತದಲ್ಲಿದ್ದು ಏಪ್ರಿಲ್‌ ತಿಂಗಳಿನಲ್ಲಿ ಸಿನಿಮಾ ಬಿಡುಗಡೆಯಾಗಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ ಸೂರಜ್‌.

ಸಿನಿಮಾ ಬಿಡುಗಡೆ ದಿನಾಂಕವನ್ನು ಸೂರಜ್ ಇನ್ನೂ ತಿಳಿಸಿಲ್ಲ. ಆದರೆ ಈ ಸಿನಿಮಾದ ಬಗ್ಗೆ ರಾಜ್‌ ಕುಟುಂಬದ ಅಭಿಮಾನಿಗಳು ಕಾತರರಾಗಿದ್ದಾರೆ. ಈಗಾಗಲೇ ಚಿತ್ರದ ಮೂರು ಹಾಡುಗಳು ಬಿಡುಗಡೆಯಾಗಿದ್ದು ಸಿನಿರಸಿಕರ ಮನ ಗೆದ್ದಿವೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು