‘ಆ್ಯಕ್ಷನ್ ಪ್ರಿನ್ಸ್’ ಧ್ರುವ ಸರ್ಜಾ ಮತ್ತು ಪ್ರೇರಣಾ ಶಂಕರ್ ವಿವಾಹ ಭಾನುವಾರ ಬೆಳಿಗ್ಗೆ ನಡೆಯಲಿದ್ದು, ಇಬ್ಬರು ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ.

ಅದ್ದೂರಿ ವಿವಾಹಕ್ಕೆ ಕುಟುಂಬದ ಸದಸ್ಯರು ಭರ್ಜರಿ ತಯಾರಿಯಲ್ಲಿ ಮುಳುಗಿದ್ದಾರೆ. ಮನೆಯ ಮುಂದೆ ಹಸಿರು ಚಪ್ಪರ ಮೈದಳೆದಿದ್ದು, ವರನ ಅರಿಸಿನ ಶಾಸ್ತ್ರದ ಕಾರ್ಯ ನಡೆಯುತ್ತಿದೆ.

ಬೆಂಗಳೂರಿನ ಜೆ.ಪಿ. ನಗರದಲ್ಲಿ ಇರುವ ಸಂಸ್ಕೃತಿ ಬೃಂದಾವನ ಕನ್ವೆನ್‌ಷನ್ ಹಾಲ್‌ನಲ್ಲಿ ನಾಳೆ ಬೆಳಿಗ್ಗೆ 7.15ರಿಂದ 7.45ರವರೆಗೆ ವೃಶ್ಚಿಕ ಲಗ್ನದಲ್ಲಿ ಮುಹೂರ್ತ ನಡೆಯಲಿದೆ. ಅಂದು ಸಂಜೆ 7ಗಂಟೆಗೆ ಆರತಕ್ಷತೆ ಹಮ್ಮಿಕೊಳ್ಳಲಾಗಿದೆ. ಕನ್ನಡ ಚಿತ್ರತಂಡದ ನಟ, ನಟಿಯರು ಸೇರಿದಂತೆ ಹಲವು ಗಣ್ಯರು ಆಗಮಿಸುವ ನಿರೀಕ್ಷೆ ಇದೆ. ನವೆಂಬರ್ 25ರಂದು ಅದೇ ಹಾಲ್‌ನಲ್ಲಿ ಧ್ರುವ ಸರ್ಜಾ ಅವರ ಅಭಿಮಾನಿಗಳಿಗಾಗಿಯೇ ಔತಣಕೂಟ ಕೂಡ ಏರ್ಪಡಿಸಲಾಗಿದೆ. ಅಭಿಮಾನಿಗಳು ಆಗಮಿಸಬೇಕು ಎಂದು ಸರ್ಜಾ ಕುಟುಂಬ ಕೋರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.