ಬೆಂಗಳೂರು:ನಟ ಧ್ರುವ ಸರ್ಜಾ ಪ್ರಯಾಣಿಸುತ್ತಿದ್ದ ಕಾರು ಬಳ್ಳಾರಿ ಹೊರವಲಯದಲ್ಲಿ ಅಪಘಾತಕ್ಕೀಡಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಕಾರಿನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ನಂದಕಿಶೋರ್ ನಿರ್ದೇಶನದ ‘ಪೊಗರು’ ಚಿತ್ರದ ಶೂಟಿಂಗ್ ಬಳ್ಳಾರಿಯಲ್ಲಿ ನಡೆಯುತ್ತಿದೆ. ಬಳ್ಳಾರಿಯಿಂದ ಶೂಟಿಂಗ್ ಮುಗಿಸಿಕೊಂಡು ಮುಂಜಾನೆ 4ಗಂಟೆಗೆ ಬೆಂಗಳೂರಿಗೆ ವಾಪಸ್ ಬರುತ್ತಿದ್ದ ವೇಳೆ ಮಾರ್ಗಮಧ್ಯೆ ಲಾರಿಯೊಂದು ಕಾರಿಗೆ ಗುದ್ದಿದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಕಾರಿನ ಹಿಂಭಾಗಕ್ಕೆ ಹಾನಿಯಾಗಿದೆ. ಧ್ರುವ ಅವರೊಟ್ಟಿಗೆ ಸ್ನೇಹಿತರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ‘ಪೊಗರು’ ರೊಮ್ಯಾಂಟಿಕ್ ಆ್ಯಕ್ಷನ್ ಸಿನಿಮಾ. ರಶ್ಮಿಕಾ ಮಂದಣ್ಣ ಹಾಗೂ ಶಾನ್ವಿ ಶ್ರೀವಾತ್ಸವ ನಟಿಸುತ್ತಿದ್ದಾರೆ. ಕನ್ನಡ ಸೇರಿದಂತೆ ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳ ಭಾಷೆಯಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ಬಿ.ಕೆ. ಗಂಗಾಧರ್ ಚಿತ್ರಕ್ಕೆ ಆರ್ಥಿಕ ಇಂಧನ ಒದಗಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.