ಜೋಗಿ ಪ್ರೇಮ್ ನಿರ್ದೇಶನದ ಧ್ರುವ ಸರ್ಜಾ ನಟನೆಯ ಬಹುನಿರೀಕ್ಷಿತ ‘ಕೆಡಿ’ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಿಸಿದೆ.

ಸಿನಿಮಾ ಬಿಡುಗಡೆಯ ದಿನಾಂಕ ಘೋಷಣೆಯಾದ ಬೆನ್ನಲ್ಲೇ 3ನೇ ಹಾಡು ಯೂಟ್ಯೂಬ್ನಲ್ಲಿ ಬಿಡುಗಡೆಯಾಗಿದೆ.
.ಸುದೀಪ್ ನಟನೆಯ ಮಾರ್ಕ್ ಚಿತ್ರಕ್ಕೆ ಶುಭಕೋರಿದ ಅಶ್ವಿನಿ ಪುನೀತ್, ರಿಷಬ್ ಶೆಟ್ಟಿ .
‘ಕೆಡಿ’ ಚಿತ್ರದ ‘ಅಣ್ತಮ್ಮ ಜೋಡೆತ್ತು ಕಣೋ‘ ಎಂಬ ಹಳ್ಳಿಸೊಗಡಿನ ಹಾಡನ್ನು ಆನಂದ್ ಆಡಿಯೊ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಚಿತ್ರದ ನಿರ್ದೇಶಕ ಪ್ರೇಮ್ ಅವರು ಈ ಹಾಡಿಗೆ ಧ್ವನಿ ನೀಡಿದ್ದಾರೆ.

ಈ ಹಾಡಿನಲ್ಲಿ ರಮೇಶ್ ಅರವಿಂದ್ ಹಾಗೂ ಧ್ರುವ ಸರ್ಜಾ ಅವರು ಅಣ್ಣ– ತಮ್ಮನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

‘ಅಣ್ತಮ್ಮ ಜೋಡೆತ್ತು ಕಣೋ‘ ಹಾಡಿಗೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದು, ಬಿ.ಎಸ್ ಮಂಜುನಾಥ್ ಅವರು ಸಾಹಿತ್ಯ ಬರೆದಿದ್ದಾರೆ.

2026ರ ಏಪ್ರಿಲ್ 30ರಂದು ‘ಕೆಡಿ’ ಚಿತ್ರ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಹೇಳಿದೆ.
.BIFFes: ರಾಯಭಾರಿಯಾಗಿ ಆಯ್ಕೆಯಾಗಿರುವುದಕ್ಕೆ ಹೆಮ್ಮೆಇದೆ: ನಟ ಪ್ರಕಾಶ್ ರಾಜ್.
ಈ ಚಿತ್ರದ 'ಶಿವ ಶಿವ‘, ‘ಸೆಟ್ಟಗಲ್ಲ’ ಹಾಡುಗಳು ಯೂಟ್ಯೂಬ್ನಲ್ಲಿ ಬಿಡುಗಡೆಯಾಗಿ ಕೋಟಿಗೂ ಅಧಿಕ ವೀಕ್ಷಣೆ ಕಂಡಿವೆ.

‘ಕೆಡಿ’ ಚಿತ್ರವು 2026ರ ಏಪ್ರಿಲ್ 30ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.
ಈ ಚಿತ್ರದಲ್ಲಿ ಢಾಕ್ ದೇವನಾಗಿ ಸಂಜಯ್ ದತ್, ಅಣ್ಣಯ್ಯಪ್ಪನಾಗಿ ರವಿಚಂದ್ರನ್ ಕಾಣಿಸಿಕೊಂಡಿದ್ದರೆ ಧರ್ಮನ ಪಾತ್ರದಲ್ಲಿ ರಮೇಶ್ ಅರವಿಂದ್, ಮಹಾಲಕ್ಷ್ಮಿಯಾಗಿ ರೀಷ್ಮಾ ನಾಣಯ್ಯ ಹಾಗೂ ಸತ್ಯವತಿ ಪಾತ್ರದಲ್ಲಿ ಶಿಲ್ಪಾ ಶೆಟ್ಟಿ ನಟಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.