ರಣವೀರ್ ಸಿಂಗ್ ನಟನೆಯ ಬಹುನಿರೀಕ್ಷಿತ ‘ಧುರಂಧರ್’ ಸಿನಿಮಾದ ಟ್ರೇಲರ್ ಅನ್ನು ನವೆಂಬರ್ 18ರಂದು ನೀತಾ ಮುಖೇಶ್ ಅಂಬಾನಿ ಸಾಂಸ್ಕೃತಿಕ ಕೇಂದ್ರದಲ್ಲಿ (NMACC) ನಡೆದ ಬೃಹತ್ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ರಾಷ್ಟ್ರ ಪ್ರಶಸ್ತಿ ವಿಜೇತರಾಗಿರುವ ಆದಿತ್ಯ ಧರ್ ನಿರ್ದೇಶಿಸಿದ್ದಾರೆ.

ಜಿಯೋ ಸ್ಟುಡಿಯೋಸ್ ಮತ್ತು ಬಿ62 ಸ್ಟುಡಿಯೋಸ್ನಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ವೀಕ್ಷಿಸಲು ಭಾರತದಾದ್ಯಂತ ರಣವೀರ್ ಅಭಿಮಾನಿಗಳು ಭಾಗವಹಿಸಿದ್ದರು. ಸಾವಿರಾರು ಅಭಿಮಾನಿಗಳ ಹರ್ಷೋದ್ಗಾರದ ನಡುವೆ ಈ ಟ್ರೇಲರ್ ಅನ್ನು ಬಿಡುಗಡೆ ಮಾಡಲಾಯಿತು.

ಈ ಚಿತ್ರದಲ್ಲಿ ರಣವೀರ್ ಸಿಂಗ್ ಜೊತೆಗೆ ಅಕ್ಷಯ್ ಖನ್ನಾ, ಆರ್. ಮಾಧವನ್, ಸಂಜಯ್ ದತ್, ಅರ್ಜುನ್ ರಾಂಪಾಲ್ ಸೇರಿದಂತೆ ಅನೇಕ ತಾರಾ ನಟರು ಅಭಿನಯಿಸಿದ್ದಾರೆ. ಬಾಲನಟಿಯಾಗಿ ಅನೇಕ ಸಿನಿಮಾಗಳಲ್ಲಿ ನಟಿಸಿರುವ ಸಾರಾ ಅರ್ಜುನ್ ಈ ಚಿತ್ರದ ನಾಯಕಿಯಾಗಿದ್ದಾರೆ.

ನೈಜ ಘಟನೆಗಳಿಂದ ಪ್ರೇರಿತವಾಗಿರುವ ಈ ಸಿನಿಮಾ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯನ್ನು ತಿಳಿಸುತ್ತದೆ. ಸಿನಿಮಾದಲ್ಲಿ ರಣವೀರ್ ಪಾಕಿಸ್ತಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಗೂಢಚಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಗುಪ್ತಚರ ಅಧಿಕಾರಿಗಳ ಧೈರ್ಯ ಮತ್ತು ತ್ಯಾಗವನ್ನು ಹೇಳುವ ಕಥೆ ಇದಾಗಿದೆ.

ಆದಿತ್ಯ ಧರ್, ಜ್ಯೋತಿ ದೇಶಪಾಂಡೆ ಮತ್ತು ಲೋಕೇಶ್ ಧರ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಸಿನಿಮಾ ಡಿಸೆಂಬರ್ 5ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
.Dhurandhar | ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಚಿತ್ರದ ಫಸ್ಟ್ ಲುಕ್ ಬಿಡುಗಡೆ.Dhurandhar: ಆರ್.ಮಾಧವನ್ ಫಸ್ಟ್ ಲುಕ್ ಹಂಚಿಕೊಂಡ ನಟ ರಣವೀರ್ ಸಿಂಗ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.