ಬೆಂಗಳೂರು: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ತಮಗೆ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಅವರು ಹೊಸದಾಗಿ ಬುಲೆಟ್ ಫ್ರೂಪ್ ಕಾರ್ ಅನ್ನು ತೆಗೆದುಕೊಂಡಿದ್ದಾರೆ ಎಂದು ಕೆಲ ರಾಷ್ಟ್ರೀಯಮಾಧ್ಯಮಗಳು ವರದಿ ಮಾಡಿವೆ. ಅಲ್ಲದೇ ಅವರು ತಮ್ಮ ಬಾಡಿಗಾರ್ಡ್‌ಗಳ ಸಂಖ್ಯೆಯನ್ನೂ ಹೆಚ್ಚಳ ಮಾಡಿಕೊಂಡಿದ್ದಾರೆ.

ಅವರು ಅನಗತ್ಯವಾಗಿ ವಿವಿಧ ಕಾರ್ಯಕ್ರಮಗಳಲ್ಲೂ ಅವರು ಭಾಗಿಯಾಗುತ್ತಿಲ್ಲ ಎಂದು ವರದಿಗಳು ತಿಳಿಸಿವೆ. ಸಲ್ಮಾನ್ ಅವರ ಟೈಗರ್ 3 ಚಿತ್ರೀಕರಣ ಪ್ರಾರಂಭವಾಗಿದ್ದು ಈ ಚಿತ್ರೀಕರಣಕ್ಕೆ ಅವರು ಬುಲೆಟ್ಫ್ರೂಪ್ ಕಾರ್ ಅನ್ನು ತೆಗೆದುಕೊಂಡೇ ಹೋಗುತ್ತಿದ್ದಾರೆ ಎನ್ನಲಾಗಿದೆ.

ಜೀವ ಬೆದರಿಕೆ ಹಿನ್ನೆಲೆಯಲ್ಲಿ ಸಲ್ಮಾನ್ ಖಾನ್ ಅವರು ಇತ್ತೀಚೆಗಷ್ಟೇಮುಂಬೈ ಪೊಲೀಸ್ ಆಯುಕ್ತ ವಿವೇಕ್ ಫನ್ಸಾಲ್ಕರ್ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಅವರು ವಿಶೇಷ ಫಿಸ್ತೂಲ್ ಇಟ್ಟುಕೊಳ್ಳಲು ಅನುಮತಿ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದರು.

ಪಂಜಾಬಿ ಗಾಯಕ ಸಿಧು ಮೂಸೆವಾಲಾ ರೀತಿಯೇ ನೀಮ್ಮನ್ನು ಮತ್ತು ನಿಮ್ಮ ತಂದೆಯನ್ನು ಕೊಲ್ಲುವುದಾಗಿ ಸಲ್ಮಾನ್ ಖಾನ್ ಅವರಿಗೆ ಬೆದರಿಕೆ ಪತ್ರ ಬಂದಿತ್ತು. ಬಳಿಕ ಸಲ್ಲೂ ಕುಟುಂಬಕ್ಕೆ ಭದ್ರತೆ ಹೆಚ್ಚಿಸಲಾಗಿತ್ತು.

ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಇಬ್ಬರು ಶಂಕಿತ ಆರೋಪಿಗಳನ್ನು ಪಂಜಾಬ್‌ನ ಅಮೃತಸರ ಜಿಲ್ಲೆಯ ಚೀಚಾ ಭಕ್ನಾ ಗ್ರಾಮದಲ್ಲಿ ಇತ್ತೀಚೆಗೆ ಪೊಲೀಸ್ ಎನ್‌ಕೌಂಟರ್‌ನಲ್ಲಿ ಹತ್ಯೆಗೈಯಲಾಗಿತ್ತು.

ವಿಡಿಯೊದಲ್ಲಿ ಸೆರೆಯಾಯಿತು ಅಪರೂಪದಲ್ಲೇ ಅಪರೂಪವಾದ ಬ್ಯ್ಲಾಕ್ ಟೈಗರ್!

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.