ಭಾನುವಾರ, ಮೇ 16, 2021
22 °C

ದಿಗಂತ್‌– ಐಂದ್ರಿತಾ ರೇ ಅಭಿನಯದ ‘ಖಾತೆಯಲ್ಲಿ ಹಣವಿಲ್ಲ’ ತೆರೆಗೆ ಬರಲು ಅಡ್ಡಿ ಇಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಿಗಂತ್‌– ಐಂದ್ರಿತಾ ರೇ ದಂಪತಿ ಅಭಿನಯದ ‘ಕ್ಷಮಿಸಿ‌‌ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಚಿತ್ರದ ನಿರ್ಮಾಣ ಬಹುತೇಕ ಪೂರ್ಣಗೊಂಡಿದ್ದು ತೆರೆಗೆ ಬರಲು ಸಜ್ಜಾಗಿದೆ. ಬೆಂಗಳೂರಿನಲ್ಲಿ ಚಿತ್ರದ ಡಬ್ಬಿಂಗ್‌ ನಡೆದಿದೆ.

ಉಪ್ಪಿ ಎಂಟರ್‌ಟೈನರ್ಸ್ ಲಾಂಛನದಲ್ಲಿ ಸಿಲ್ಕ್‌ ಮಂಜು ಅವರು ಈ ಚಿತ್ರ ನಿರ್ಮಿಸುತ್ತಿದ್ದಾರೆ. ವಿನಾಯಕ ಕೋಡ್ಸರ ಅವರ ಕಥೆ, ಚಿತ್ರಕಥೆ ನಿರ್ದೇಶನವಿದೆ. ಪ್ರಜ್ವಲ್ ಪೈ ಅವರು ಸಂಗೀತ ನೀಡಿದ್ದಾರೆ. ರವೀಂದ್ರ ಜೋಶಿ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

ಸಾಗರ, ಸಿಗಂಧೂರು, ಬೆಂಗಳೂರಿನ ಸುಂದರ ಪರಿಸರಗಳಲ್ಲಿ ಚಿತ್ರೀಕರಣ ನಡೆದಿದೆ. ನಂದಕಿಶೋರ್ ಎನ್. ರಾವ್ ಛಾಯಾಗ್ರಹಣ ಹಾಗೂ ರಾಹುಲ್ ವಸಿಷ್ಠ ಅವರ ಸಂಕಲನವಿರುವ ಈ‌ ಚಿತ್ರದ ಹಾಡುಗಳನ್ನು ವಿಶ್ವಜಿತ್ ರಾವ್ ಹಾಗೂ ತ್ರಿಲೋಕ್ ತ್ರಿವಿಕ್ರಂ ರಚಿಸಿದ್ದಾರೆ. ಚಿತ್ರಕಥೆ ಹಾಗೂ ಸಂಭಾಷಣೆ ವೇಣು ಹಸ್ರಾಳಿ ಬರೆದಿದ್ದಾರೆ.
ಹಿರಿಯ ನಟಿ‌ ಉಮಾಶ್ರೀ, ರಂಜನಿ ರಾಫವನ್, ಪಿ.ಡಿ.ಸತೀಶ್‌ ಚಂದ್ರ, ಪ್ರಕಾಶ್ ತೂಮಿನಾಡ್ ಹಾಗೂ ನೀನಾಸಂನ ಹಲವು ಕಲಾವಿದರು ‌ಈ ಚಿತ್ರದ ತಾರಾಗಣದಲ್ಲಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು