ಬುಧವಾರ, ಜೂನ್ 29, 2022
24 °C

ನಟ ದಿಗಂತ್‌ ಆರೋಗ್ಯದಲ್ಲಿ ಚೇತರಿಕೆ: ಪತ್ನಿ ಐಂದ್ರಿತಾ ರೈ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಣಿಪಾಲ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ನಟ ದಿಗಂತ್ ಚೇತರಿಕೆಯ ಹಾದಿಯಲ್ಲಿದ್ದಾರೆ ಎಂದು ಅವರ ಪತ್ನಿ, ನಟಿ ಐಂದ್ರಿತಾ ರೈ ಟ್ವೀಟ್‌ ಮಾಡಿದ್ದಾರೆ.

ನಿನ್ನೆ ದಿಗಂತ್ ಅವರಿಗೆ ನಡೆಸಲಾದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಅವರು ಚೇತರಿಸಿಕೊಳ್ಳುವ ಹಾದಿಯಲ್ಲಿದ್ದಾರೆ ಎಂದು ನಿಮ್ಮೆಲ್ಲರಿಗೂ ತಿಳಿಸಲು ಸಂತೋಷವಾಗುತ್ತಿದೆ. ಅಭಿಮಾನಿಗಳು, ಹಿತೈಷಿಗಳು, ಮಾಧ್ಯಮ ಸ್ನೇಹಿತರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು ಎಂದು ಹೇಳಿದ್ದಾರೆ. 

ಗೋವಾದಲ್ಲಿ ಬ್ಯಾಕ್ ಫ್ಲಿಪ್ ಮಾಡುವ ವೇಳೆ ಅವರಿಗೆ ಕುತ್ತಿಗೆ ಭಾಗದಲ್ಲಿ ಗಾಯವಾಗಿತ್ತು. ಹೆಲಿಕಾಪ್ಟರ್‌ ಮೂಲಕ ಇಲ್ಲಿನ ಆಸ್ಪತ್ರೆಗೆ ಕರೆತರಲಾಗಿತ್ತು. ನುರಿತ ವೈದ್ಯರ ತಂಡವು ತಪಾಸಣೆ ನಡೆಸಿ, ಶಸ್ತ್ರಚಿಕಿತ್ಸೆಗೆ ಒಳಪಡಿಸಿತ್ತು. ಅವರು ಬುಧವಾರ ಸಂಜೆ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. 

ದಿಗಂತ್‌ ಆರೋಗ್ಯವಾಗಿದ್ದು ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು