ಶುಕ್ರವಾರ, ಮೇ 14, 2021
25 °C

ಶೀಘ್ರದಲ್ಲೇ ‘ಕ್ಷಮಿಸಿ‌‌ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಎನ್ನಲಿದ್ದಾರೆ ದಿಗಂತ್‌!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬಿಡುಗಡೆಗೆ ಮುನ್ನವೇ ಶೀರ್ಷಿಕೆ ಮುಖಾಂತರವೇ ಪ್ರೇಕ್ಷಕರನ್ನು ಸೆಳೆದಿರುವ ಚಿತ್ರ ನಟ ದಿಗಂತ್‌ ಅಭಿನಯದ ‘ಕ್ಷಮಿಸಿ‌‌ ನಿಮ್ಮ ಖಾತೆಯಲ್ಲಿ ಹಣವಿಲ್ಲ’, ಶೀಘ್ರದಲ್ಲೇ ತೆರೆಗೆ ಬರಲಿದೆ.

ಸಾಗರ, ಸಿಗಂಧೂರು, ಬೆಂಗಳೂರಿನ ಸುತ್ತಮುತ್ತ ಚಿತ್ರೀಕರಣಗೊಂಡಿರುವ ಈ ಚಿತ್ರಕ್ಕೆ ಇದೀಗ ಬೆಂಗಳೂರಿನ ಖ್ಯಾತ ಸ್ಟುಡಿಯೊದಲ್ಲಿ ಹಿನ್ನೆಲೆ ಸಂಗೀತ ಅಳವಡಿಸಲಾಗುತ್ತಿದೆ.‌ ಕೆಲವೇ ದಿನಗಳಲ್ಲಿ ಚಿತ್ರ ತೆರೆಯ ಮೇಲೆ ಬರಲಿದೆ.

ಉಪ್ಪಿ ಎಂಟರ್‌ಟೈನರ್ ಲಾಂಛನದಲ್ಲಿ ಸಿಲ್ಕ್ ಮಂಜು ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಕಿರುಚಿತ್ರಗಳನ್ನು ನಿರ್ದೇಶಿಸಿ ಅನುಭವವಿರುವ ಪತ್ರಕರ್ತ ವಿನಾಯಕ ಕೋಡ್ಸರ ನಿರ್ದೇಶನದ ಚೊಚ್ಚಲ ಚಿತ್ರವಿದು‌. ಹಾಸ್ಯಮಯ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿನಾಯಕ ಕೋಡ್ಸರ ಅವರೇ ಕಥೆ, ಚಿತ್ರಕಥೆ ಬರೆದಿದ್ದಾರೆ. ಪ್ರಜ್ವಲ್ ಪೈ ಅವರ ಸಂಗೀತ ನೀಡಿದ್ದಾರೆ.

ನಂದ ಕಿಶೋರ್ ಎನ್ ರಾವ್ ಛಾಯಾಗ್ರಹಣ ಹಾಗೂ ರಾಹುಲ್ ವಸಿಷ್ಠ ಅವರ ಸಂಕಲನವಿರುವ ಈ‌ ಚಿತ್ರದ ಹಾಡುಗಳನ್ನು ವಿಶ್ವಜಿತ್ ರಾವ್ ಹಾಗೂ ತ್ರಿಲೋಕ್ ತ್ರಿವಿಕ್ರಂ ರಚಿಸಿದ್ದಾರೆ. ನಿಜ ಜೀವನದ ದಂಪತಿ ದಿಗಂತ್ ಹಾಗೂ ಐಂದ್ರಿತಾ ರೇ ಈ ಚಿತ್ರದಲ್ಲಿ ನಾಯಕ, ನಾಯಕಿಯಾಗಿ ನಟಿಸಿದ್ದಾರೆ.

ಹಿರಿಯ ನಟಿ‌ ಉಮಾಶ್ರೀ, ರಂಜನಿ ರಾಫವನ್, ಪಿ.ಡಿ.ಸತೀಶ್‌ ಚಂದ್ರ, ಪ್ರಕಾಶ್ ತುಮ್ಮಿನಾಡ್ ಹಾಗೂ ನೀನಾಸಂನ ಹಲವು ಕಲಾವಿದರು ‌ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು