ಶನಿವಾರ, ಸೆಪ್ಟೆಂಬರ್ 18, 2021
30 °C

ತೆರೆಗೆ ಬರಲು ಸಜ್ಜಾಗುತ್ತಿದೆ ‘ಮಾರಿಗೋಲ್ಡ್‌’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶೀರ್ಷಿಕೆಯ ಮೂಲಕವೇ ನಿರೀಕ್ಷೆ ಹುಟ್ಟಿಸಿರುವ‍, ನಟ ದಿಗಂತ್‌ ಅಭಿನಯದ ಚಿತ್ರ ‘ಮಾರಿಗೋಲ್ಡ್’ ಶೀಘ್ರದಲ್ಲೇ ತೆರೆಗೆ ಬರಲು ಸಜ್ಜಾಗುತ್ತಿದೆ.

ಈಗಾಗಲೇ ಚಿತ್ರದ ಪೋಸ್ಟ್‌ ‌ಪ್ರೊಡಕ್ಷನ್ ಕೆಲಸಗಳು ಪ್ರಗತಿಯಲ್ಲಿದ್ದು, ಚಿತ್ರದ ಡಬ್ಬಿಂಗ್ ಕಾರ್ಯ ಮುಗಿದು, ಹಿನ್ನೆಲೆ ಸಂಗೀತ ಅಳವಡಿಕೆ ಕೊನೆಯ ಹಂತದಲ್ಲಿದೆ. ಇಷ್ಟರಲ್ಲೇ ಸೆನ್ಸಾರ್ ಅಂಗಳಕ್ಕೆ ಹೋಗಲು ಚಿತ್ರವು ಸಿದ್ಧವಾಗುತ್ತಿದೆ. ಕ್ರೈಮ್‌ ಥ್ರಿಲ್ಲರ್‌ ಕಥಾನಕ‌ ಹೊಂದಿರುವ ಈ ಚಿತ್ರವನ್ನು ರಾಘವೇಂದ್ರ ಎಂ.ನಾಯಕ್‌ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇದು ರಾಘವೇಂದ್ರ ಅವರ ನಿರ್ದೇಶನದ ಚೊಚ್ಚಲ ಚಿತ್ರ. ದಿಗಂತ್ ಅವರ ಫಸ್ಟ್‌ಲುಕ್ ಪೋಸ್ಟರ್ ಈಗಾಗಲೇ ಬಿಡುಗಡೆಯಾಗಿದ್ದು, ಮೊದಲ ಬಾರಿಗೆ ದಿಗಂತ್ ಹೊಸ ರೀತಿಯ ಪಾತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ ಎನ್ನುತ್ತಿದೆ ಚಿತ್ರತಂಡ.

ಆರ್.ವಿ.ಕ್ರಿಯೇಷನ್ಸ್ ಮೂಲಕ ರಘುವರ್ಧನ್ ಫಿಲ್ಮ್ಸ್ ಬ್ಯಾನರ್‌ನಲ್ಲಿ ರಘುವರ್ಧನ್‌ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರಘುವರ್ಧನ್‌ ಅವರು ಮೂಲತಃ ನಿರ್ದೇಶಕರಾಗಿದ್ದರೂ, ಯುವ ನಿರ್ದೇಶಕ ರಾಘವೇಂದ್ರ ಅವರಿಗೆ ಅವಕಾಶ ನೀಡಿದ್ದಾರೆ. ಈ ಹಿಂದೆ ‘ತಿಮ್ಮರಾಯ’, ‘ಬದ್ರಿ’, ‘ಗುಣವಂತ’, ‘ಮಿಸ್ಟರ್ ಎಲ್.ಎಲ್.ಬಿ.’ ಮೊದಲಾದ ಚಿತ್ರಗಳನ್ನು ರಘುವರ್ಧನ್ ನಿರ್ದೇಶಿಸಿದ್ದರು

ಈ ಚಿತ್ರಕ್ಕೆ ವೀರ್ ಸಮರ್ಥ್ ಅವರ ಸಂಗೀತವಿದ್ದು, ಯೋಗರಾಜ್ ಭಟ್, ಕವಿರಾಜ್ ಮತ್ತು ವಿಜಯ್ ಭರಮಸಾಗರ ಅವರು ಸಾಹಿತ್ಯ ಬರೆದಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ಅರ್ಜುನ್ ರಾಜ್ ಸಾಹಸ, ಕಲೈ ಅವರ ನೃತ್ಯ ನಿರ್ದೇಶನವಿದೆ. ಬೆಂಗಳೂರು, ಸಕಲೇಶಪುರದ ಸುತ್ತಮುತ್ತಲ ತಾಣಗಳಲ್ಲಿ ಚಿತ್ರೀಕರಣಗೊಂಡಿರುವ ಈ ಚಿತ್ರದಲ್ಲಿ ಸಂಗೀತಾ ಶೃಂಗೇರಿ ನಾಯಕಿಯಾಗಿದ್ದಾರೆ. ಉಳಿದಂತೆ ಸಂಪತ್‌ಕುಮಾರ್‌, ಕಾಕ್ರೋಚ್‌ ಸುಧಿ, ಯಶ್‌ಶೆಟ್ಟಿ, ವಜ್ರಾಂಗ್ ಶೆಟ್ಟಿ, ಬಾಲ ರಾಜ್ವಾಡಿ, ಗಣೇಶ್‌ರಾವ್, ಭಾಸ್ಕರ್ ಪಾಂಡವಪುರ, ಮನಮೋಹನ್ ರೈ, ಮಹಾಂತೇಶ್ ಹೀರೆಮಠ, ಮಿಮಿಕ್ರಿ ಗೋಪಿ ಸೇರಿದಂತೆ ಹಲವು ಕಲಾವಿದರು ನಟಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು