ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾ.22 ರಂದು ‘ದಿಲ್ ಖುಷ್’ ತೆರೆಗೆ

Published 14 ಮಾರ್ಚ್ 2024, 23:37 IST
Last Updated 14 ಮಾರ್ಚ್ 2024, 23:37 IST
ಅಕ್ಷರ ಗಾತ್ರ

ಹೊಸಬರಾದ ರಂಜಿತ್, ಸ್ಪಂದನ ಸೋಮಣ್ಣ ಜೋಡಿಯಾಗಿ ನಟಿಸಿರುವ ‘ದಿಲ್ ಖುಷ್’ ಚಿತ್ರ ಮಾರ್ಚ್ 22 ರಂದು ತೆರೆಗೆ ಬರಲಿದೆ. ಜಯಪ್ರಭ ಕಲರ್ ಫ್ರೇಮ್ಸ್ ಲಾಂಛನದಲ್ಲಿ ಜಯಲಕ್ಷ್ಮಿ ಪ್ರವೀಣ್ ಹಾಗೂ ಪ್ರಭ ಶೇಖರ್ ನಿರ್ಮಿಸಿರುವ ಚಿತ್ರಕ್ಕೆ ಪ್ರಮೋದ್ ಜಯ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. 

‘ಸಿಂಪಲ್ ಸುನಿ ಅವರ ಬಳಿ ಕೆಲಸ ಮಾಡಿದ್ದೆ. ಇದು ನನ್ನ ಮೊದಲ ಸಿನಿಮಾ. ಕಥೆ ಹಾಗೂ ಚಿತ್ರಕಥೆ ಬರೆದು ನಿರ್ದೇಶಿಸಿದ್ದೇನೆ. ರೊಮ್ಯಾಂಟಿಕ್ ಕಾಮಿಡಿ ಕಥಾಹಂದರ ಹೊಂದಿರುವ ಚಿತ್ರವಿದು’ ಎಂದರು  ಪ್ರಮೋದ್ ಜಯ.  

ಐದು ಹಾಡುಗಳಿರುವ ಈ ಚಿತ್ರಕ್ಕೆ ಪ್ರಸಾದ್ ಕೆ ಶೆಟ್ಟಿ ಸಂಗೀತ ನಿರ್ದೇಶನವಿದೆ. ಪ್ರದ್ಯೋತನ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ನಿವಾಸ್ ನಾರಾಯಣ್ ಛಾಯಾಚಿತ್ರಗ್ರಹಣ, ಜ್ಞಾನೇಶ್ ಬಿ ಮಠದ್ ಸಂಕಲನವಿದೆ.

ರಂಗಾಯಣ ರಘು, ಧರ್ಮಣ್ಣ ಕಡೂರು, ರವಿ ಭಟ್, ಅರುಣ ಬಾಲರಾಜ್, ರಘು ರಾಮನಕೊಪ್ಪ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT