ಸೋಮವಾರ, ಡಿಸೆಂಬರ್ 5, 2022
22 °C

ನವೆಂಬರ್‌ 11ಕ್ಕೆ ‘ದಿಲ್‌ ಪಸಂದ್‌’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಡಾರ್ಲಿಂಗ್ ಕೃಷ್ಣ ಅವರು ನಾಯಕನಾಗಿ ನಟಿಸಿರುವ ‘ದಿಲ್ ಪಸಂದ್’ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ನವೆಂಬರ್‌ 11ಕ್ಕೆ ಚಿತ್ರಮಂದಿರಕ್ಕೆ ಪ್ರವೇಶಿಸಲಿದೆಯಂತೆ.  

‘ಹನ್ನೊಂದು ತಿಂಗಳ ಹಿಂದೆ ನಮ್ಮ ಚಿತ್ರ ಆರಂಭವಾಗಿತ್ತು. ಕುಟುಂಬ ಸಮೇತ ನೋಡಬಹುದಾದ ನಮ್ಮ ಚಿತ್ರ, ‘ದಿಲ್ ಪಸಂದ್’ನಷ್ಟೇ ಸಿಹಿಯಾಗಿದೆ. ನನ್ನ ಕಥೆ ಮೆಚ್ಚಿಕೊಂಡು ನಿರ್ಮಾಣಕ್ಕೆ ಮುಂದಾದ ನಿರ್ಮಾಪಕ ಸುಮಂತ್ ಕ್ರಾಂತಿ ಅವರಿಗೆ ಹಾಗೂ ನನ್ನ ಇಡೀ ಚಿತ್ರತಂಡಕ್ಕೆ ಧನ್ಯವಾದ’ ಎಂದರು ನಿರ್ದೇಶಕ ಶಿವತೇಜಸ್. ‌

‘ಐಶು ನನ್ನ ಪಾತ್ರದ ಹೆಸರು. ಈ ಚಿತ್ರದಲ್ಲಿ ತುಂಬಾ ಭಾವನಾತ್ಮಕವಾಗಿರುವ ಪಾತ್ರ ನನ್ನದು. ಪ್ರೀತಿಯ ಕಥಾ ಹಂದರದ ಚಿತ್ರಗಳಲ್ಲಿ ನಾನು ಅಭಿನಯಿಸಿದ್ದೇನೆ. ಆದರೆ ಪೂರ್ಣ ಪ್ರಮಾಣದ ಪ್ರೇಮಕಥೆಯಲ್ಲಿ ನಟಿಸಿರುವುದು ಇದೇ ಮೊದಲು ಎಂದರು ನಾಯಕಿ ನಿಶ್ವಿಕಾ ನಾಯ್ಡು.

‘ಈ ಚಿತ್ರದಲ್ಲಿ ಮುಗ್ಧ ಹುಡುಗಿಯ ಪಾತ್ರ ನನ್ನದು. ಮನೆಮಂದಿಯೆಲ್ಲಾ ಒಟ್ಟಿಗೆ ಕುಳಿತು ನೋಡಬಹುದಾದ ಚಿತ್ರ ‘ದಿಲ್ ಪಸಂದ್’. ಈ ಚಿತ್ರದಲ್ಲಿ ಅಭಿನಯಿಸಿರುವುದಕ್ಕೆ ಖುಷಿಯಾಗಿದೆ ಎಂದರು ನಟಿ ಮೇಘಾ ಶೆಟ್ಟಿ.

‘ನಾನು ಕಥೆ ಕೇಳಬೇಕಾದರೆ ಸಾಕಷ್ಟು ಖುಷಿಪಟ್ಟಿದ್ದೆ. ಸಾಕಷ್ಟು ಖುಷಿಯಾಗಿಯೇ ಡಬ್ಬಿಂಗ್ ಮಾಡಿದ್ದೇನೆ. ಕಾಮಿಡಿ ಜೊತೆಗೆ ತಂದೆ-ಮಗನ ಭಾವನಾತ್ಮಕ ಸನ್ನಿವೇಶಗಳು ಜನರ ಮನಸ್ಸಿಗೆ ಹತ್ತಿರವಾಗಲಿದೆ’ ಎಂದರು ನಾಯಕ ಡಾರ್ಲಿಂಗ್ ಕೃಷ್ಣ.

‘ನಿರ್ದೇಶಕರು ಕಥೆ ಹೇಳಿದ ರೀತಿಯಲ್ಲೇ ಸಿನಿಮಾ ಮಾಡಿಕೊಟ್ಟಿದ್ದಾರೆ. ಕೆಲವರು ಕಥೆ ಹೇಳುವುದೇ ಬೇರೆ. ಚಿತ್ರ ಮಾಡುವುದೇ ಬೇರೆ. ನಾನು ಇತ್ತೀಚೆಗೆ ಚಿತ್ರ ನೋಡಿದೆ. ಶಿವತೇಜಸ್ ಹೇಳಿದ ರೀತಿಯಲ್ಲೇ ಚಿತ್ರ ಮಾಡಿದ್ದಾರೆ’ ಎನ್ನುತ್ತಾರೆ ನಿರ್ಮಾಪಕ ಸುಮಂತ್ ಕ್ರಾಂತಿ. ರಂಗಸ್ವಾಮಿ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು