ಬೆಂಗಳೂರು: ಚಂದನವನದ ನಟ ದಿಲೀಪ್ ರಾಜ್ ಅವರು ಮೇ 13ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಜಿಮ್, ವರ್ಕೌಟ್ ಎಂದು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡಿದ್ದ 47 ವರ್ಷದ ನಟನ ಸಾವು ಚಿತ್ರರಂಗಕ್ಕೆ ಆಘಾತ ಉಂಟುಮಾಡಿದೆ.

ಇದರ ಬೆನ್ನಲ್ಲೇ ದಿಲೀಪ್ ಪತ್ನಿ ಶ್ರೀವಿದ್ಯಾ ಅವರು ಸಾಮಾಜಿಕ ಜಾಲತಾಣದಲ್ಲಿ ದೇವರನ್ನು ಬೈದು ಬೇಸರ ಹೊರಹಾಕಿದ್ದಾರೆ.

‘ನನಗೆ ಈಗ ಸದ್ಯದ ಪರಿಸ್ಥಿತಿಯಲ್ಲಿ ಏನನ್ನಿಸುತ್ತಿದೆಯೆಂದರೆ - ಒಂದು ಸಂಸಾರ ಹೇಗಿರಬೇಕು ಅಂದ್ರೆ, ಒಬ್ಬ ಗಂಡ ಹೆಂಡತಿಯನ್ನು ಯಾವಾಗಲೂ ಹೊಡೀತಾ ಇರಬೇಕು, ಕುಡಿದು ಬಂದು ಗಲಾಟೆ ಮಾಡ್ತಾ ಇರಬೇಕು. ಒಬ್ಬ ಹೆಂಡತಿ ಯಾವಾಗಲೂ ಗಂಡನನ್ನೇ ದೂಷಿಸುತ್ತಾ ಇರಬೇಕು. ಮಕ್ಕಳು ತಂದೆ-ತಾಯಿಯನ್ನು ಗೌರವಿಸಬಾರದು. ತಂದೆ-ತಾಯಿಯೂ ಅಷ್ಟೇ, ಮಕ್ಕಳನ್ನು ಯಾವಾಗಲೂ ದೂಷಿಸುತ್ತಾ ಇರಬೇಕು. ಒಂದು ಮನೆಯಲ್ಲಿ ಶಾಂತಿ, ನೆಮ್ಮದಿ ಅನ್ನೋದೇ ಇರಬಾರದು. ಒಬ್ಬರು ಒಬ್ಬರು ಕಿತ್ತಾಡ್ಕೊಂಡೇ ಇರಬೇಕು. ಯಾಕೆಂದರೆ ದೇವರಿದ್ದಾನೆ, ಹುಷಾರಾಗಿರಿ. ಯಾರ ಮನೆ ಚೆನ್ನಾಗಿದೆ, ಯಾರ ಮನೆಯಲ್ಲಿ ಯಾವಾಗಲೂ ನಗು ಇರುತ್ತದೆ, ಯಾರು ತುಂಬಾ ಖುಷಿಯಿಂದ ಬದುಕುತ್ತಿರ್ತಾರೋ - ಅಂಥವರ ಮನೆಯ ಮೇಲೆ ಅವನಿಗೆ ಯಾವಾಗಲೂ ಕಣ್ಣು ಇರುತ್ತದೆ. ದೇವರಿದ್ದಾನೆ, ಹುಷಾರಾಗಿರಿ. ಅವನು ನಿಮ್ಮ ಸಂಸಾರವನ್ನು ಖಂಡಿತವಾಗಿಯೂ ಬಿಡುವುದಿಲ್ಲ. ಖಂಡಿತ ನಾಶ ಮಾಡದೆ ಬಿಡುವುದಿಲ್ಲ. ದೇವರಿದ್ದಾನೆ ಹುಷಾರಾಗಿರಿ’ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.

ಪತಿಯನ್ನು ಕಳೆದುಕೊಂಡ ನೋವಲ್ಲಿರುವ ಶ್ರೀವಿದ್ಯಾ ಅವರ ಪೋಸ್ಟ್ಗೆ ಅನೇಕರು ‘ಸಮಾಧಾನ ಮಾಡಿಕೊಳ್ಳಿ’ ಎಂದು ಕಮೆಂಟ್ ಮೂಲಕ ಸಂತೈಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.